27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಅಳದಂಗಡಿಯಲ್ಲಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಉಜ್ವಲ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ತೇರ್ಗಡೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಮೂರು ಕಡೆಗಳಲ್ಲಿ ನಡೆಯುವ ಗೌರವ ಸನ್ಮಾನ ಸಮಾರಂಭಕ್ಕೆ ಜೂ.28ರಂದು ಬೆಳಗ್ಗೆ ಅಳದಂಗಡಿ ಸ್ವರಾಜ್ ಟವರ್ಸ್ ನಲ್ಲಿ ಚಾಲನೆ ನೀಡಲಾಯಿತು.

ಶಾಸಕ ಹರೀಶ್ ಪೂಂಜ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಉಜ್ವಲ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು. ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ. ಈ ಗೌರವ ಇನ್ನುಳಿದ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದು ತಿಳಿಸಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಹಾಶಕ್ತಿ ಕೇಂದ್ರಗಳ ವ್ಯಾಪ್ತಿಯ ಗ್ರಾಮಗಳನ್ನು ಆಧರಿಸಿ ಮೂರು ಪ್ರತ್ಯೇಕ ಸಮಯ ಹಾಗೂ ಸ್ಥಳಗಳಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ, ಬಿಜೆಪಿ ಪ್ರಭಾರಿ ಜಯಂತ್ ಕೋಟ್ಯಾನ್, ಸುಲ್ಕೇರಿ ಶ್ರೀರಾಮ ಶಾಲೆಯ ಮುಖ್ಯಸ್ಥರಾದ ಗಣೇಶ ಹೆಗ್ಡೆ, ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ವಿವಿಧ ಸಿಎ ಬ್ಯಾಂಕ್ ಗಳ ಅಧ್ಯಕ್ಷರುಗಳು, ಗ್ರಾಮ ಸಮಿತಿ ಪದಾಧಿಕಾರಿಗಳು, ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.

Related posts

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ರೋಗಿಗಳ ಪಾಲಿನ ಭರವಸೆಯ ಹೊಂಗಿರಣ ಡಾ. ಪ್ರಭಾಚಂದ್ರ

Suddi Udaya

ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಲೋಕೇಶ್ವರಿ ವಿನಯಚಂದ್ರ ಆಯ್ಕೆ

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!