30.7 C
ಪುತ್ತೂರು, ಬೆಳ್ತಂಗಡಿ
September 27, 2026
ಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬೆಳ್ತಂಗಡಿ: ಲಯನ್ಸ್ ಅಮೃತ ಬಿಂದು ಸೇವಾ ಯೋಜನೆ ಯಡಿಯಲ್ಲಿ ತಾಲೂಕಿನ ವಿವಿಧ ಶಾಲೆಗಳಿಗೆ ನೀಡುತ್ತಿರುವ ಬರೆಯುವ ಪುಸ್ತಕ ವಿತರಣಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿ ಇಲ್ಲಿ ಜರುಗಿತು. ಇದರ ಉದ್ಘಾಟನೆಯನ್ನು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಡಾ. ರಾಜಶ್ರೀ ಬಿ. ಯವರು ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಬಸವಲಿಂಗಪ್ಪ ಭಾಗವಹಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪರವರು ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹರೀಶ್ ಮಜಲು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಮಾನಂದ ಬಿ, ಲಯನ್ಸ್ ಕ್ಲಬ್ ಬೆಳ್ತಂಗಡಿ ನಿಯೋಜಿತ ಅಧ್ಯಕ್ಷರಾದ ರಘುರಾಮ ಶೆಟ್ಟಿ, ಜತೆ ಕಾರ್ಯದರ್ಶಿ ನಾಣ್ಯಪ್ಪ ನಾಯ್ಕ್, ಕಾರ್ಯಕ್ರಮ ಸಂಯೋಜಕ ವಸಂತ್ ಶೆಟ್ಟಿ ಶ್ರದ್ದಾ, ಲಯನ್ಸ್ ಸದಸ್ಯರುಗಳಾದ ರಾಮಕೃಷ್ಣ ಗೌಡ, ಗೋಪಾಲಕೃಷ್ಣ ಕಾಂಚೋಡು, ರವೀಂದ್ರ ಶೆಟ್ಟಿ ಬಳಂಜ, ಮನೋರಮ ಮುರಳಿ ಬಲಿಪ, ಮಂದಾರ ಬಲಿಪ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಅಮಿತಾನಂದ ಹೆಗ್ಡೆ ಸ್ವಾಗತಿಸಿದರು. ಲಯನ್ ರಮೇಶ್ ಫೈಲಾರ್ ರವರು ಧನ್ಯವಾದ ನೀಡಿದರು ಶಾಲಾ ಶಿಕ್ಷಕಿ ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು.

Related posts

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya

ಪಡ್ಡಂದಡ್ಕ ಕಟ್ಟೆ: ಪುನಃ ಪ್ರತಿಷ್ಠಾ ಕಲಶಾಭಿಷೇಕ, ದೊಂಪದಬಲಿ ನೇಮೋತ್ಸವ

Suddi Udaya
error: Content is protected !!