30.7 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯವರದಿಶಿಕ್ಷಣ ಸಂಸ್ಥೆಶುಭ ವಿವಾಹ

ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

ಉಜಿರೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ತೇರ್ಗಡೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಗೌರವ ಸನ್ಮಾನವು ಜೂ.28ರಂದು ಉಜಿರೆ ಅನುಗ್ರಹ ಸಭಾಭವನದಲ್ಲಿ ಜರುಗಿತು.

ಶಾಸಕ ಹರೀಶ್ ಪೂಂಜ ಅವರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಹಾಶಕ್ತಿ ಕೇಂದ್ರಗಳ ವ್ಯಾಪ್ತಿಯ ಗ್ರಾಮಗಳನ್ನು ಆಧರಿಸಿ ಮೂರು ಪ್ರತ್ಯೇಕ ಸಮಯ ಹಾಗೂ ಸ್ಥಳಗಳಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಸಂಚಾಲಕರಾದ ಕೆ ಮೋಹನ್ ಕುಮಾರ್, ಸೇಕ್ರೇಟ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ಎನ್. ಜೋಸೆಫ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್,ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಉಜಿರೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಮಾಜಿ ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಬೆಳಾಲು ಗ್ರಾ. ಪಂ. ಮಾಜಿ ಅಧ್ಯಕ್ಷೆ ವಿದ್ಯಾಶ್ರೀನಿವಾಸ್ ಗೌಡ ವಿವಿಧ ಸಿಎ ಬ್ಯಾಂಕ್ ಗಳ ಅಧ್ಯಕ್ಷರುಗಳು, ಗ್ರಾಮ ಸಮಿತಿ ಪದಾಧಿಕಾರಿಗಳು, ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.ಸಮೀಕ್ಷಾ ಶಿರ್ಲಾಲು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!