23.8 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಾಧವ ಎಮ್. ಕೆ ಅವರು ಜೂ.29 ರಂದು 2026-27ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು.

ಬಳಿಕ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, “ಸಾಧಿಸುವ ಇಚ್ಛಾಶಕ್ತಿ ನಮ್ಮಲ್ಲಿರಬೇಕು. ಮನಸ್ಸಿದ್ದರೆ ಮಾರ್ಗ” ಎಂದು ಹೇಳಿದರು.

ಶಾಲೆಯ ವಿವಿಧ ಸಂಘಗಳಾದ ಸಾಂಸ್ಕೃತಿಕ ಸಂಘ, ಭಿತ್ತಿ ಪತ್ರಿಕೆ ಸಂಘ, ಕಲಾ ಸಂಘ, ಹವ್ಯಾಸ ಸಂಘ, ಕ್ರೀಡಾ ಸಂಘ, ಇಂಟೆರಾಕ್ಟ್ ಸಂಘ, ಪರಿಸರ ಸಂಘ, ವಿಜ್ಞಾನ ಸಂಘ, ಸಾಹಿತ್ಯ ಸಂಘ, ಗಣಿತ ಸಂಘ ಇವುಗಳ ಉದ್ಘಾಟನೆ ವಿಶೇಷ ರೀತಿಯಲ್ಲಿ “ಆರೋಹಣ” ಎಂಬ ಶೀರ್ಷಿಕೆಯಡಿಯಲ್ಲಿ ನಡೆಯಿತು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿನಿಯರಾದ ಪೃಥ್ವಿ ಹಾಗೂ ಶ್ರೇಯ ನಿರೂಪಿಸಿ, ವಂಶಿ ವಂದಿಸಿದರು.

Related posts

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಹಾಗೂ ಉನ್ನತೀಕರಣ ಕಾಮಗಾರಿಗಳ ಶಿಲಾನ್ಯಾಸ: ಬಿ.ಪಿ.ಹೆಚ್ ಲ್ಯಾಬ್ ಮತ್ತು 12 ಬೆಡ್ ಗಳ ಐಸೋಲೇಶನ್ ವಾರ್ಡ್ ಕಟ್ಟಡ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪುದುವೆಟ್ಟು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ

Suddi Udaya

ಮಾಲಾಡಿ ಮತ್ತು ಸೋಣಂದೂರು ಶಕ್ತಿ ಕೇಂದ್ರದ ವತಿಯಿಂದ ಬೆಸ್ಟ್ ಎಂ.ಎಲ್ ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ ಪೂಂಜರಿಗೆ ಗೌರಾವಾಭಿನಂದನೆ

Suddi Udaya
error: Content is protected !!