22.7 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮವು ಜೂನ್ 27ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಚಾಲಕ ವಂ|ಸ್ವಾ|ಡಾ| ಸ್ಟ್ಯಾನಿ ಗೋವಿಯಸ್ ವಹಿಸಿ ಮಾತನಾಡಿ ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಕೋರಿ, ಸಂಸ್ಥೆಯನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲಿ. ಶಾಲೆಯ ಹಿತಕ್ಕಾಗಿ ಅವರು ಮುಕ್ತ ಹೃದಯ ಮತ್ತು ಮುಕ್ತ ಮನಸ್ಸಿನಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಹೋಲಿ ಕ್ರಾಸ್ ಚರ್ಚ್ ಕಾರ್ಡೆಲ್ ನ ಸಹಾಯಕ ಧರ್ಮ ಗುರು ವಂ|ಸ್ವಾ| ಲಾಯಿಡ್ ರೋಹನ್ ಡಿಸೋಜ ಮಾತನಾಡಿ ನಿಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿ, ಎಲ್ಲರ ಮಾತನ್ನು ಆಲಿಸಿ ಮತ್ತು ನಿಮ್ಮ ಅತ್ಯುತ್ತಮ ಸೇವೆಯನ್ನು ನೀಡಿ.ಸದಾ ಸತ್ಯನಿಷ್ಠೆ ಮತ್ತು ಪ್ರಾಮಾಣಿಕತೆಯನ್ನು ಕಾಪಾಡಿಕೊಳ್ಳಿ. ಸಣ್ಣ ಸೇವೆಯೂ ಸಮಾಜಕ್ಕೆ ದೊಡ್ಡ ಕೊಡುಗೆಯಾಗುತ್ತದೆ ಎಂದು ಹೇಳಿ, ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ವಂ|ಸ್ವಾ| ಲಾಯಿಡ್ ರೋಹನ್ ಡಿಸೋಜ ರವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಪಥ ಸಂಚಲನದ ಮೂಲಕ ವೇದಿಕೆಗೆ ಆಗಮಿಸಿ, ತಮ್ಮ ನಾಯಕತ್ವದ ಪದವಿಯನ್ನು ಗಣ್ಯ ವ್ಯಕ್ತಿಗಳಿಂದ ಪಡೆದು, ಪ್ರತಿಜ್ಞೆಯನ್ನು ಸ್ವೀಕರಿಸಿದರು.

ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರು, ಮುಖ್ಯ ಅತಿಥಿಗಳು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಸೇಕ್ರೆಡ್ ಹಾರ್ಟ್ ಚರ್ಚ್ ಮಡಂತ್ಯಾರಿನ ಸಹಾಯಕ ಧರ್ಮಗುರು ವಂ|ಸ್ವಾ| ಲ್ಯಾರಿ ಪಿಂಟೋ, ಶಾಲಾ ಮುಖ್ಯೋಪಾಧ್ಯಾಯ ವಂ|ಸ್ವಾ| ದೀಪಕ್ ಲಿಯೋ ಡೇಸ, ಮಡಂತ್ಯಾರು ಚರ್ಚಿನ ಉಪಾಧ್ಯಕ್ಷ ನೆಲ್ಸನ್ ಲಸ್ರಾದೊ, ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಸಂಯೋಜಕ ಲಿಯೋ ನೊರೊನ್ಹಾ, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ -ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಹಶಿಕ್ಷಕಿಯರಾದ ಐಡಾ ಡಿಕುನ್ಹಾ, ಮಲ್ಲಿಕಾ ತರಬೇತಿಯನ್ನು ನೀಡಿ ಸಹಕರಿಸಿದರು. ವಿದ್ಯಾರ್ಥಿಗಳಾದ ಆರಾಧ್ಯ ಮತ್ತು ನಿಧೀಶ್ ಶೆಟ್ಟಿ ನಿರೂಪಿಸಿ, ನಿಧಾ ಸ್ವಾಗತಿಸಿ, ವರ್ಣೀತ್ ವಂದಿಸಿದರು.

Related posts

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

Suddi Udaya

ಮನು ಉಜಿರೆ ಸಾಹಿತ್ಯ ಸಂಯೋಜನೆಯ “ದಕ್ಷಿಣ ಮಂತ್ರಾಲಯದ ಈ ಪುಣ್ಯಕ್ಷೇತ್ರ” ಧ್ವನಿಸುರುಳಿ ಬಿಡುಗಡೆ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

Suddi Udaya
error: Content is protected !!