31.1 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 10ನೇ ತಿರುವಿನ ಸಮೀಪ ಮರವೊಂದು ರಸ್ತೆಗೆ ಉರುಳಿ ಸುಮಾರು ಒಂದು ತಾಸು ಕಾಲ ಸಂಚಾರ ವ್ಯತ್ಯಯ, ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೋಮವಾರ ರಾತ್ರಿ ನಡೆದಿದೆ

.ಸಂಜೆ 7 ಗಂಟೆಗೆ ಸುಮಾರಿಗೆ ಮರ ಉರುಳಿ ಬಿದ್ದಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿ ಇಕ್ಕೆಲಗಳಲ್ಲೂ ಒಂದೂವರೆ ತಾಸಿನಷ್ಟು ಕಾಲ ವಾಹನಗಳು ಸಾಲುಗಟ್ಟಿ ನಿಂತವು. ಜೋರಾಗಿ ಸುರಿಯುತ್ತಿದ್ದ ಮಳೆ, ಮಂಜುಕವಿದ ವಾತಾವರಣ, ಬೆಳಕಿನ ಅಭಾವ ತ್ವರಿತವಾಗಿ ಮರ ತೆರವುಗೊಳಿಸಲು ಅಡ್ಡಿಯಾಯಿತು.

ಉಪವಲಯ ಅರಣ್ಯಾಧಿಕಾರಿ ರಂಜಿತ್, ಸಿಬ್ಬಂದಿಗಳಾದ ಗೋಪಾಲ, ಮನೋಹರ್, ಇಸ್ಮಾಯಿಲ್, ವಾಹನ ಸವಾರರು ಹಾಗೂ ಮತ್ತಿತರರು ಮರ ತೆರವಿಗೆ ಸಹಕರಿಸಿದರು. ಸೋಮವಾರ ಬೆಳಗಿನ ಜಾವ ಎರಡನೇ ತಿರುವಿನ ಬಳಿ ಮರ ರಸ್ತೆಗೆ ಬಾಗಿ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಘಾಟಿ ಪ್ರದೇಶದಲ್ಲಿ ನೂರಾರು ಅಪಾಯಕಾರಿ ಮರಗಳಿದ್ದು, ಜೋರಾದ ಮಳೆ ವೇಳೆ ರಸ್ತೆಗೆ ಉರುಳಿ ಸಂಚಾರಕ್ಕೆ ಸಮಸ್ತೆಯಾಗುತ್ತಿರುವುದು ಸರ್ವೇಸಾಮಾನ್ಯವಾಗಿದೆ.

Related posts

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಎಂ. ಗಂಗಾಧರ ಮಿತ್ತಮಾರ್, ಪ್ರಧಾನ ಸಂಚಾಲಕರಾಗಿ ಪಿ. ಎಚ್. ನಿತ್ಯಾನಂದ ಶೆಟ್ಟಿ ನೇಮಕ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ ಶಾಖೆ” ಉದ್ಘಾಟನೆ

Suddi Udaya

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಬಳಂಜ: ಸಂಜೀವ ದೇವಾಡಿಗ ನಿಧನ

Suddi Udaya

ಡಿ:7ರಂದು ಬೆಳ್ತಂಗಡಿಯಲ್ಲಿ 12ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!