November 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ತಾಲೂಕು ಸಾರ್ವಜನಿಕ ಆರೋಗ್ಯ ಆಸ್ಪತ್ರೆಯಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಸ್ವಯಂಸೇವಕರಾಗಿ ಸಕ್ರಿಯವಾಗಿ ಭಾಗವಹಿಸಿದರು.

ಗೈಡ್ಸ್ ವಿದ್ಯಾರ್ಥಿನಿಯರಾದ ಶ್ರುತ ಶೆಟ್ಟಿ, ಅಲೀನಾ ಭಾನು, ದಿಷಾ ಡಿ.ಎ., ಸಮನ್ವಿ ಭಟ್ ಹಾಗೂ ಐಷಾಲಿ ಬಿ.ಎಸ್. ಅವರು ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗೆ ತಮ್ಮ ಸೇವೆಯನ್ನು ಸಲ್ಲಿಸಿದರು. ಈ ಮೂಲಕ ಸಮಾಜಮುಖಿ ಸೇವೆಯ ಮಹತ್ವವನ್ನು ಅರಿತು, ಸಾರ್ವಜನಿಕ ಆರೋಗ್ಯ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸಿದ ಅಮೂಲ್ಯ ಅನುಭವವನ್ನು ಪಡೆದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಶ್ರೀಮತಿ ಹೇಮಲತಾ ಎಂ.ಆರ್. ಅವರ ಮಾರ್ಗದರ್ಶನದಲ್ಲಿ ಹಾಗೂ ಶಾಲೆಯ ಸ್ಕೌಟ್ಸ್-ಗೈಡ್ಸ್ ಸಂಯೋಜಕಿ ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಪೂಜಾರಿ ಅವರ ನೇತೃತ್ವದಲ್ಲಿ ಭಾಗವಹಿಸಿದರು.

Related posts

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ಪಾಲೇದು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya
error: Content is protected !!