31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ಜೂ.30ರಂದು ನಡೆಯಿತು.


ಮುಖ್ಯ ಅತಿಥಿ, ಶ್ರೀ ಲಕ್ಷ್ಮೀ ನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕಾಂಚನ ಇಲ್ಲಿಯ ಮುಖ್ಯ ಶಿಕ್ಷಕರಾದ ಲಕ್ಷಣ ಗೌಡ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

“ವಿದ್ಯಾರ್ಥಿ ಸರಕಾರದಲ್ಲಿ ನಾಯಕನಾಗಿ ಚುನಾಯಿತನಾದ ವಿದ್ಯಾರ್ಥಿಯು ಶಾಲೆಯಲ್ಲಿ ಹಲವಾರು ರೀತಿಯ ಜವಾಬ್ದಾರಿಗಳನ್ನು ನಿರ್ವಹಿಸಿಕೊಂಡು ಮುಂದೊಂದು ದಿನ ದೇಶದ ಉತ್ತಮ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿದೆ. ಉತ್ತಮ ರೀತಿಯಲ್ಲಿ ಶಾಲೆಯನ್ನು ಮುನ್ನಡೆಸಿಕೊಂಡು ಹೋಗಿ” ಎಂದು ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯ ಕಮಲ್ ತೇಜು ರಜಪೂತ್ ಅವರು ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣವಚನ ಬೋಧಿಸಿದರು.
ಶಿಕ್ಷಕಿ ಉಷಾ ಕುಮಾರಿ ಮಂತ್ರಿಗಳ ಜವಾಬ್ದಾರಿಯನ್ನು ತಿಳಿಸಿದರು.
ವೇದಿಕೆಯಲ್ಲಿ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.

ಶಿಕ್ಷಕಿ ಶೋಭಾ ಸ್ವಾಗತಿಸಿ, ಸುಮಾ ವಂದಿಸಿದರು. ಶ್ರೀಜಾ ಕಾರ್ಯಕ್ರಮ ನಿರ್ವಹಿಸಿದರು.

Related posts

ವೇಣೂರು: ಸುದೇರ್ದು ನಿವಾಸಿ ಸುರೇಶ ಮೂಲ್ಯ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ನಿಡಿಗಲ್ ಬದ್ರಿಯಾ ಜುಮ್ಮಾ ಮಸ್ಜಿದ್ ವತಿಯಿಂದ ಮೀಲಾದ್ ಕಾರ್ಯಕ್ರಮ

Suddi Udaya

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya
error: Content is protected !!