July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ರಾಜ್ಯದಾದ್ಯಂತ ಸ್ವಾಸ್ಥ್ಯ ಸಂಕಲ್ಪ ಕೈಗೊಂಡ 1.31 ಲಕ್ಷ ವಿದ್ಯಾರ್ಥಿಗಳು

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆನ್‌ಲೈನ್ ಮೂಲಕ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು. ರಾಜ್ಯದ 1,281 ಶಾಲಾ-ಕಾಲೇಜುಗಳ 1,31039 ವಿದ್ಯಾರ್ಥಿಗಳು ಏಕಕಾಲದಲ್ಲಿ ಆನ್‌ಲೈನ್ ಮೂಲಕ ಮಾಹಿತಿಯನ್ನು ಪಡೆದರು.


‘ಯುವಜನತೆ ನಮ್ಮ ದೇಶದ ಆಸ್ತಿ. ಅವರು ದುಶ್ಚಟಗಳ ಮೊರೆ ಹೋಗದಂತೆ ಜಾಗೃತೆವಹಿಸಬೇಕಾದ ಅಗತ್ಯತೆ ಇಂದು ನಮ್ಮೆದುರಿಗಿದೆ. ಪಂಚೇAದ್ರಿಯಗಳು ಆಕರ್ಷಿಸುತ್ತವೆ. ಆದರೆ ಅವುಗಳನ್ನು ಹತೋಟಿಯಲ್ಲಿಟ್ಟುಕೊಳ್ಳಬೇಕಾದ ಕರ್ತವ್ಯ ನಮ್ಮದು. ಪ್ರಜ್ಞಾಪೂರ್ವಕವಾಗಿ ತಪ್ಪುಗಳಾಗದಂತೆ ಜಾಗೃತೆವಹಿಸಬೇಕು. ದುಶ್ಚಟಗಳು ನಮ್ಮ ಬದುಕನ್ನು ಹಾಳು ಮಾಡುತ್ತವೆ. ಕೆಟ್ಟದ್ದನ್ನು ತಿರಸ್ಕರಿಸುವ ಮನೋಭಾವ ನಮ್ಮಲ್ಲಿರಬೇಕು. ದುಶ್ಚಟಗಳಿಂದ ದೂರವಿದ್ದಲ್ಲಿ ಸುಂದರ ಬದುಕು ನಮ್ಮೆದುರಿಗಿದೆ. ಇವುಗಳು ತನ್ನನ್ನು ಮಾತ್ರ ಕೆಡಿಸುವುದಲ್ಲದೆ ಸಮಾಜವನ್ನೇ ಕೆಡಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ದಾರಿತಪ್ಪದೆ ಸದಾ ಎಚ್ಚರಿಕೆಯಿಂದ ಇರಬೇಕು’ ಎಂದು ಶ್ರೀ ಹೆಗ್ಗಡೆಯವರು ಮಾರ್ಗದರ್ಶನ ನೀಡಿದರು.

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಮಾತನಾಡುತ್ತಾ ‘ಯುವಜನತೆ ಮತ್ತು ವಿದ್ಯಾರ್ಥಿಗಳನ್ನು ಮಾದಕ ವ್ಯಸನಗಳಿಂದ ದೂರವಿರಿಸುವ ಪ್ರಯತ್ನಗಳನ್ನು ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆ ಮಾಡುತ್ತಾ ಬಂದಿದೆ. ಮದ್ಯಮುಕ್ತ ಸಮಾಜದ ನಿರ್ಮಾಣದ ಪ್ರಯತ್ನ ಆಂದೋಲನದ ರೀತಿಯಲ್ಲಿ ನಡೆಯುತ್ತಿದೆ. ಮಾದಕ ವ್ಯಸನದಲ್ಲಿ ನಮ್ಮ ದೇಶ ಬಹಳ ಮುಂದಿದೆ. ಜೀವನದಲ್ಲಿ ಎಂದಿಗೂ ಮೌಲ್ಯ ಮತ್ತು ನೈತಿಕತೆಯನ್ನು ಕಳೆದುಕೊಳ್ಳಬಾರದು. ನಾವು ನಮ್ಮಲ್ಲಿರುವ ದೌರ್ಬಲ್ಯಗಳಿಂದ ಬದುಕನ್ನು ಹಾಳುಗೆಡವಬಾರದು. ನಾವು ಜಾಗೃತರಾಗಿ ವಿದ್ಯಾವಂತರಾಗಿ, ಇತರರಿಗೆ ಮಾರ್ಗದರ್ಶಕರಾಗಿ ಬದುಕಬೇಕು. ಮಾದಕವಸ್ತು ವ್ಯಕ್ತಿ ಮತ್ತು ಸಮಾಜಕ್ಕೆ ನೋವನ್ನು ನೀಡುತ್ತದೆ. ನಾವು ಬದುಕಿರುವಷ್ಟು ದಿನ ಸುತ್ತಮುತ್ತಲಿನವರಿಗೆ ಬೆಳಕನ್ನು ನೀಡಬೇಕು. ಬೆಳಕು ನೀಡುವ ಶಕ್ತಿ ಇಂದಿನ ಯುವಕರಲ್ಲಿದೆ. ಅದನ್ನರಿತು ಈ ಸಮಾಜವನ್ನು ಮುನ್ನಡೆಸಬೇಕಿದೆ.’ ಎಂದರು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಬೆಂಗಳೂರಿನ ನಾರಾಯಣ ಹೃದಯಾಲಯದ ಅಧ್ಯಕ್ಷರು ಭಾರತದ ಪ್ರಸಿದ್ಧ ಹೃದಯ ಚಿಕಿತ್ಸಕರಾದ ಡಾ| ದೇವಿಪ್ರಸಾದ್ ಶೆಟ್ಟಿಯವರು ‘ಯುವ ಸಮುದಾಯ ತಮ್ಮ ಜಾಗೃತ ಮನಸ್ಸನ್ನು ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಉಪಯೋಗಿಸಬೇಕು. ಅವರು ಯಾವುದೇ ಮಾದಕ ವ್ಯಸನಕ್ಕೆ ಬಲಿಯಾಗದೆ ದೇಶದ ಸಂಪನ್ಮೂಲ ವ್ಯಕ್ತಿಗಳಾಗಿ ಜನಸೇವೆ, ಸಮಾಜಸೇವೆಯಲ್ಲಿ ತೊಡಗಿಕೊಳ್ಳುವ ಮೂಲಕ ಈ ಸಮಾಜವನ್ನು ಕಾಪಾಡಬೇಕು’ ಎಂದು ಮಾರ್ಗದರ್ಶನ ನೀಡಿದರು.


ಬೆಂಗಳೂರಿನ ಪೊಲೀಸ್ ವರಿಷ್ಠಾಧಿಕಾರಿ ಡಾ. ಹೆಚ್. ಎನ್. ವೆಂಕಟೇಶ ಪ್ರಸನ್ನ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾದಕ ವಸ್ತುಗಳ ಬಳಕೆ, ದುರ್ಬಳಕೆ, ದುಷ್ಪರಿಣಾಮಗಳು, ಎದುರಿಸಬೇಕಾದ ಕಾನೂನುಕ್ರಮ ಮತ್ತು ಸಾಮಾಜಿಕ ಸಮಸ್ಯೆಗಳ ಕುರಿತು ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.


ಇದುವರೆಗೆ ಜನಜಾಗೃತಿ ವೇದಿಕೆಯ ಮೂಲಕ ಸುಮಾರು 24,500 ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳನ್ನು ಆಯೋಜಿಸಿ 21ಲಕ್ಷ ವಿದ್ಯಾರ್ಥಿಗಳಲ್ಲಿ ದುಶ್ಚಟದ ವಿರುದ್ಧ ಜಾಗೃತಿ ಮೂಡಿಸಲಾಗಿದೆ. ಈ ನಿಟ್ಟಿನಲ್ಲಿ 1300 ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತುದಾರರ ತರಬೇತಿಯನ್ನು ನೀಡಲಾಗಿದೆ.


ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಿಲ್ ಕುಮಾರ್ ಎಸ್.ಎಸ್.ರವರ ವಿನೂತನ ಚಿಂತನೆ ಮತ್ತು ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆಯಿತು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯ್ಸ್ರವರು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಯೋಜನೆಯ ಟ್ರಸ್ಟಿಗಳಾದ ಡಾ| ಹರೀಶ್ ಕೃಷ್ಣ ಸ್ವಾಮಿ, ಮುಖ್ಯ ಹಣಕಾಸು ಅಧಿಕಾರಿಗಳಾದ ಶಾಂತಾರಾಮ್ ಆರ್. ಪೈ, ಪ್ರಾದೇಶಿಕ ನಿರ್ದೇಕರಾದ ಡಿ. ಜಯರಾಮ್ ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ

Suddi Udaya

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಮೇ 7 : ಜ್ಯೋತಿ ಆಸ್ಪತ್ರೆ, ಲಾಯಿಲ– ತುರ್ತು ಮತ್ತು ಅಪಘಾತ ಚಿಕಿತ್ಸಾ ಆರೈಕೆ ಘಟಕ ಉದ್ಘಾಟನೆ

Suddi Udaya

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ನಿಷೇಧ

Suddi Udaya

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya
error: Content is protected !!