31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ :ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟೀಯ ವೈದ್ಯರ ದಿನಾಚರಣೆ

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ರಾಷ್ಟೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಎಸ್. ಡಿ ಯಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಮುಖ್ಯ ವೈದ್ಯಧಿಕಾರಿಯಾಗಿರುವ ಡಾ. ಶಿವಪ್ರಸಾದ್ ಶೆಟ್ಟಿ ಆಗಮಿಸಿ ‘truth is God, God is truth’ ಸತ್ಯ, ಪ್ರಾಮಾಣಿಕತೆ, ಪಾರದರ್ಶಕತೆ, ಧನಾತ್ಮಕ ಚಿಂತನೆಗಳ ಮೂಲಕ ನಾವು ಬಲಿಷ್ಠರಾಗಿದ್ದರೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯಯುತವಾಗಿರಬಹುದು, ಯಾವುದೇ ರೋಗಗಳನ್ನು ಹಿಮ್ಮೆಟ್ಟಿಸಬಹುದು ವೈದ್ಯರು ನಮ್ಮಲ್ಲಿ ಸಕಾರಾತ್ಮಕ ಚಿಂತನೆಯನ್ನು ಉದ್ದೀಪನ ಗೊಳಿಸಿ ನಮ್ಮ ಪಾಲಿಗೆ ದೇವತಾ ಸ್ವರೂಪಿಗಳಾಗಿ ವೈದ್ಯೋ ನಾರಾಯಣೋ ಹರಿ :ಎಂಬ ಮಾತಿಗೆ ಸಾಕ್ಷಿಯಾಗುತ್ತಾರೆ ಎಂದು ಹೇಳಿದರು.

ವೈದ್ಯಲೋಕದ ದಂತಕಥೆ ಯಾದ ಡಾ. ಬಿ ಸಿ ರಾಯ್ ರವರ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ, ನಿಸ್ವಾರ್ಥ ಸೇವೆ, ತ್ಯಾಗವನ್ನು ಸ್ಮರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ವಹಿಸಿಕೊಂಡಿದ್ದರು.
ಶಿಕ್ಷಕಿ ಪೂರ್ಣಿಮ ಕೆಎಂ ನಿರೂಪಿಸಿದ ಈ ಕಾರ್ಯಕ್ರಮಕ್ಕೆ ಶಿಕ್ಷಕಿ ಕೇಶವತಿ ಕೆ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಸಂಜೀವ ಕೆ ವಂದಿಸಿದರು.

Related posts

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ.96.07 ಫಲಿತಾಂಶ

Suddi Udaya
error: Content is protected !!