28.1 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಶ್ವ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಉಜಿರೆಯ ಖ್ಯಾತ ದಂತ ವೈದ್ಯರಾಗಿರುವ ಡಾ.ದೀಪಾಲಿ ಡೊಂಗ್ರೆ ಆಗಮಿಸಿದ್ದರು. ಶಾಲೆಯ ಕಬ್ ಹಾಗೂ ಬುಲ್ ಬುಲ್ ನ ವಿದ್ಯಾರ್ಥಿಗಳು ಇವರನ್ನು ವಿಶಿಷ್ಟ ರೀತಿಯಲ್ಲಿ ಕಿರು ಪ್ರಹಸನದ ಮೂಲಕ ಸ್ವಾಗತಿಸಿದರು. ಬಳಿಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಇಂಟರಾಕ್ಟ್ ಕ್ಲಬ್ ಹಾಗೂ ಜೂನಿಯರ್ ರೆಡ್ ಕ್ರಾಸ್ ಇದರ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು ವೃತ್ತಿ ಮಾರ್ಗದರ್ಶನ ನೀಡಿದರು.

ಎಂಬಿಬಿಎಸ್ ಇದರ ಒಳ ಹೊರಗಿನ ನೋಟಗಳು, ಡಾಕ್ಟರ್ ಆಗುವ ರೀತಿ, ಅದರಲ್ಲಿರುವ ವಿಭಾಗಗಳು,ಅದನ್ನು ಹೇಗೆ ಆಯ್ಕೆ ಮಾಡುವುದು. ವಿದ್ಯಾರ್ಥಿಗಳು ಹೇಗೆ ಓದಬೇಕು,ಗುರಿ ಹೇಗಿರಬೇಕು ಇತ್ಯಾದಿ ವಿಚಾರಗಳನ್ನು ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿ ಅಮೂಲ್ಯ ಕಾರ್ಯಕ್ರಮ ನಿರ್ವಹಿಸಿ, ಜಾಹ್ನವಿ ಸ್ವಾಗತಿಸಿ, ನಿಧೀಕ್ಷಾ ಅತಿಥಿಗಳ ಕಿರು ಪರಿಚಯ ಮಾಡಿದರು. ಚಿಂತನ ಧನ್ಯವಾದ ಇತ್ತರು. ಶಾಲಾ ಶಿಕ್ಷಕ ವೃಂದ ಹಾಗು ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಶಿಶಿಲ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

Suddi Udaya
error: Content is protected !!