23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ:ಎಸ್.ಡಿ.ಎಂ ಮಹಿಳಾ ಐ.ಟಿ.ಐ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ

ಉಜಿರೆ: ಎಸ್.ಡಿ.ಎಂ ಮಹಿಳಾ ಐ.ಟಿ.ಐ ಉಜಿರೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಡಿಪ್ಲೋಮಾ ಕಾಲೇಜಿನ ಉಪ ಪ್ರಾಂಶುಪಾಲರಾದ ಅಮರೇಶ ಹೆಬ್ಬಾರ್, ಎಸ್.ಡಿ.ಎಂ ಐ.ಟಿ.ಐ ವೇಣೂರು ಕಾಲೇಜಿನ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್, ಪತ್ರಕರ್ತೆ ಶ್ರೇಯಾ ಶೆಟ್ಟಿ, ಪತ್ರಕರ್ತ ನಿಶಾನ್ ಬಂಗೇರ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಧನ್ಯವಾದ ಕುಮಾರ್ ಉಪಸ್ಥಿತರಿದ್ದರು.

ಆರಂಭದ ವಿದ್ಯಾರ್ಥಿನಿಯರಾದ ರೂಪಾ ಶೆಟ್ಟಿ ಇವರು ಅಂದು ಇದ್ದ ಹಾಗೂ ಇಂದು ಇರುವ ಸಂಸ್ಥೆಯ ಎಲ್ಲಾ ಸೌಕರ್ಯ, ಶಿಕ್ಷಣ ನೀಡುವ ಪದ್ದತಿ ಉದ್ಯೋಗದ ಅವಕಾಶ ಮುಂತಾದ ವಿಷಯದ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು. ಹಿರಿಯ ವಿದ್ಯಾರ್ಥಿನಿ ಶಶಿಪ್ರಭ ಶುಭ ಹಾರೈಸಿದರು.

ಸಂಸ್ಥೆಯ ಪ್ರಾಚಾರ್ಯ ಪ್ರಕಾಶ್ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕ್ಷಮಾ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಸಂದ್ಯಾ ಧನ್ಯವಾದವಿತ್ತರು.

ಇದೇ ಸಂದರ್ಭದಲ್ಲಿ ಮಳೆಗಾಲದ ತಿನಿಸುಗಳು ಎಂಬ ಶೀರ್ಷಿಕೆಯ ಅಡಿಯಲ್ಲಿ ಹೆಚ್ಚಿನ ವಿದ್ಯಾರ್ಥಿನಿಯರು ತಮ್ಮ ತಮ್ಮ ಮನೆಯಿಂದ ವಿವಿಧ ಬಗೆಯ ಹಲಸಿನ, ಮಾವಿನ ತಿಂಡಿ ತಿನಿಸುಗಳು, ಹಲವು ಬಗೆಯ ಪದಾರ್ಥಗಳು, ಸಿಹಿ ತಿನಿಸುಗಳನ್ನು ಮಾಡಿಕೊಂಡು ಬಂದಿದ್ದು ಎಲ್ಲರೂ ಸೇರಿ ಹಂಚಿ ತಿನ್ನುವ ಮೂಲಕ ನಾವೆಲ್ಲಾ ಒಂದೇ ಕುಟುಂಬದ ಸದಸ್ಯರು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು.

Related posts

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಉಜಿರೆ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಹಾಗೂ ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya
error: Content is protected !!