23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶಾಂತಿವನದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಧರ್ಮಸ್ಥಳದ ಶಾಂತಿವನದಲ್ಲಿ ಜು. 1ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಖ್ಯಾತ ವೈದ್ಯರಾದ ಡಾ. ಬಿಧಾನ್ ಚಂದ್ರ ರಾಯ್ ಅವರ ಜನ್ಮದಿನ ಹಾಗೂ ಪುಣ್ಯತಿಥಿಯ ಸ್ಮರಣಾರ್ಥವಾಗಿ ವೈದ್ಯರ ಸೇವೆ, ಸಮರ್ಪಣೆ ಹಾಗೂ ಮಾನವೀಯತೆಯನ್ನು ಗೌರವಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಪ್ರಸಾದ್ ಶೆಟ್ಟಿ ಮಾತನಾಡಿ, ವೈದ್ಯ ವೃತ್ತಿಯು ಕೇವಲ ಉದ್ಯೋಗವಲ್ಲ, ಸಮಾಜಸೇವೆಯ ಮಹತ್ತರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ರೋಗಿಗಳ ಸೇವೆಯಲ್ಲಿ ಕರುಣೆ, ನಿಷ್ಠೆ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ವೈದ್ಯರ ಕರ್ತವ್ಯ ಎಂದು ಅವರು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಾಂತಿವನದ ಸಾಧಕರಾದ ಸೋಮಶೇಖರ್ ಭಾಗವಹಿಸಿ, ವೈದ್ಯರ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಜಗನ್ನಾಥ್, ಹಿರಿಯ ವೈದ್ಯಾಧಿಕಾರಿಗಳಾದ ಡಾ. ಸುಜಾತಾ ಕೆ. ಎ. ಹಾಗೂ ಡಾ. ಗೀತಾ ಬಿ. ಶೆಟ್ಟಿ, ಸ್ಥಾನಿಕ ವೈದ್ಯಾಧಿಕಾರಿಗಳಾದ ಡಾ. ಬಿಂದು, ಯೋಗ ಮತ್ತು ನೈತಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವೈದ್ಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವೈದ್ಯರ ಸೇವೆಯನ್ನು ಸ್ಮರಿಸಿ, ಅವರನ್ನು ಗೌರವಿಸಲಾಯಿತು.

Related posts

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಸವಣಾಲು: ಹಿತ್ತಿಲಪೇಲ ಪ್ರದೇಶಕ್ಕೆ ಶಾಶ್ವತ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೂಕ್ತ ವರದಿ ನೀಡುವಂತೆ ಮೇಲಂತಬೆಟ್ಟು ಗ್ರಾ.ಪಂ.ಗೆ ಮೌಖಿಕ ಆದೇಶ ನೀಡಿದ ಬೆಳ್ತಂಗಡಿ ನ್ಯಾಯಾಧೀಶರು

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ತ್ಯಾಜ್ಯ ಎಸೆದವರಿಂದಲೇ ತೆರವುಗೊಳಿಸಿ ದಂಡ ವಿಧಿಸಿದ ಪಡಂಗಡಿ ಗ್ರಾ.ಪಂ.

Suddi Udaya

ಆ.1 ರಿಂದ 15ರ ವರೆಗೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿಮೇಳ: ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳ ಮೇಲೆ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ : ತಡೆಗೋಡೆ ಏಕಾಏಕಿ ಕುಸಿದು ಬಿದ್ದು ಓರ್ವ ಸಾವು

Suddi Udaya

ಕೇಳ್ಕರ, ಕಲ್ಲಮೆ – ಮುಂಡೂರು ಕೆಸರುಮಯ; ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya
error: Content is protected !!