23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

ಕಕ್ಕಿಂಜೆ : “ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಕೆ ಎಂ ಸಿ ಆಸ್ಪತ್ರೆ ತುರ್ತು ಚಿಕಿತ್ಸಾ ವಿಭಾಗ-ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಹಾಗೂ
ಇಂಟರ್ ನ್ಯಾಷನಲ್ ಪವರ್ ಕಾರ್ಪೊರೇಷನ್ ಪ್ರೈ.ಲಿ. ಚಾರ್ಮಾಡಿ – ಅಣಿಯೂರು ಇವರ ಸಂಯುಕ್ತ ಆಶ್ರಯದಲ್ಲಿ. ಕೆಎಂಸಿ ತುರ್ತು ಚಿಕಿತ್ಸಾ ವಿಭಾಗ – ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇವರ ಸಹಕಾರದೊಂದಿಗೆ, “ಪ್ರಥಮ ಚಿಕಿತ್ಸೆ (First Aid,Basic Life Support) ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರವು ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ನಡೆಯಿತು.

ಕಾರ್ಯಗಾರದಲ್ಲಿ ಇಂಟರ್ ನ್ಯಾಷನಲ್ ಪವರ್ ಕಾರ್ಪೊರೇಷನ್ ಪ್ರೈ .ಲಿ. ಚಾರ್ಮಾಡಿ – ಅಣಿಯೂರು ಇದರ ಸಿಬ್ಬಂದಿಗಳು ಪಾಲ್ಗೊಂಡಿದ್ದರು, ಕೆಎಂಸಿ ತುರ್ತು ಚಿಕಿತ್ಸಾ ವಿಭಾಗದ ಸಿಬ್ಬಂದಿ ಗುರು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಯ ವೈದ್ಯಕೀಯ ನಿರ್ದೇಶಕ ಡಾ‌.ಮುರಳಿಕೃಷ್ಣ ಇರ್ವತ್ರಾಯ ಮಾತನಾಡಿ ತುರ್ತು ಸಂದರ್ಭಗಳಲ್ಲಿ ಹಾಗೂ ಇನ್ನಿತರ ಆನಾರೋಗ್ಯದ ಅಥವಾ ಅನಾಹುತಗಳು ಸಂಭವಿಸುವ ಸಮಯದಲ್ಲಿ ಜೀವ ಉಳಿಸಲು ದೈರ್ಯ ಮಾಡಬೇಕು, ಹಾಗೂ ಎದೆಗುಂದದೆ ಪ್ರಥಮ ಚಿಕಿತ್ಸೆ ನೀಡಬೇಕು, ಹೃದಯಾಘಾತ, ಪಾರ್ಶ್ವವಾಯು, ನೀರಿನಲ್ಲಿ ಮುಳುಗುವುದು, ಅಗ್ನಿ ಅವಘಡ ಹಾಗೂ ಅಪಘಾತಗಳು/ಆಘಾತ, ಹಾವು ಕಡಿತ, ನಾಯಿ ಕಡಿತ, ವಿದ್ಯುತ್ ಆಘಾತ ಮತ್ತು ಸುಟ್ಟಗಾಯಗಳು, ಸಿಡಿಲು/ಮಿಂಚು,ರಕ್ತಸ್ರಾವದ ಗಾಯಗಳು ಮುಂತಾದ ಸಂದರ್ಭಗಳಲ್ಲಿ ಪ್ರತಿಯೊಬ್ಬ ಏನು ಮಾಡಬೇಕು ಮತ್ತು ಏನು ತಪ್ಪು ಮಾಡಬಾರದು ಎಂಬುದರ ಬಗ್ಗೆ ಇನ್ನಿತರ ತುರ್ತು ಸಂದರ್ಭದಲ್ಲಿ ಆರೋಗ್ಯದ ಬಗ್ಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ವಿವರಿಸಿದರು. ಹೃದಯ ಸ್ತಂಭನ ಸಂದರ್ಭದಲ್ಲಿ CPR ಕೊಡುವುದರ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿಯನ್ನು ನಡೆಸಿಕೊಟ್ಟರು.

ವೈದ್ಯಕೀಯ ತುರ್ತು ಪರಿಸ್ಥಿತಿಗಳು ಮತ್ತು ವಿಪತ್ತುಗಳು ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ರೋಗಿಗಳನ್ನು ಅಥವಾ ಸಂತ್ರಸ್ತರನ್ನು ನಿಭಾಯಿಸಲು ಕನಿಷ್ಠ ಮೂಲಭೂತ ಜ್ಞಾನ ಅತ್ಯಗತ್ಯ, ಜೀವ ಉಳಿಸಲು ವೈದ್ಯರೇ ಆಗಬೇಕೆಂದಿಲ್ಲ ಸಾಮಾಜಿಕ ಕಳಕಳಿ ಇರುವವರು ಯಾರು ಬೇಕಾದರೂ ಈ ಕಾರ್ಯವನ್ನು ಮಾಡಬಹುದು ಎಂದರು.


ಈ ಸಂದರ್ಭದಲ್ಲಿ ಕೆ ಎಂ ಸಿ ತುರ್ತು ಚಿಕಿತ್ಸಾ ವಿಭಾಗದ ವೈದ್ಯಾಧಿಕಾರಿ ಡಾ.ದೆವಯಾನಿ , ಇಂಟರ್ ನ್ಯಾಷನಲ್ ಪವರ್ ಕಾರ್ಪೊರೇಷನ್ ಪ್ರೈ.ಲಿ. ಚಾರ್ಮಾಡಿ – ಅಣಿಯೂರು,ಇದರ ಸಿನಿಯರ್ ಡಿಜಿಎಮ್ ಅಮ್ರತೇಶ್ ಎಂ ಅರಿಗ ,ಸಿನಿಯರ್ ಎಂಜಿನಿಯರ್ ಮಹೇಶ್ ರಾವ್, ಸಿನಿಯರ್ ಎಂಜಿನಿಯರ್ ವಿಶ್ವನಾಥ್, ಅಕೌಂಟ್ಸ್ ಆಫೀಸರ್ ಯಜ್ಞೇಶ್ ಭಟ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕೆಎಂಸಿ ಆಸ್ಪತ್ರೆ ತುರ್ತು ಚಿಕಿತ್ಸಾ ವಿಭಾಗದ ಪಿ ಆರ್ ಓ ಸುಪ್ರೀತಾ ಸಹಕರಿಸಿದರು.

Related posts

ಪಣೆಜಾಲು ಶ್ರೀ ಸ್ಟಾರ್‌ ಯುವಕ ಮಂಡಲದ ಅಧ್ಯಕ್ಷರಾಗಿ ಗಣೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ರಾಜೇಶ್

Suddi Udaya

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

Suddi Udaya

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya

ಮೈರೋಳ್ತಡ್ಕ -ಬಂದಾರು 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!