23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲಿಷ್ ಇಟಾಲಿಕ್ ಶೈಲಿಯ ಬರವಣಿಗೆಯ ತರಬೇತಿ ಕಾರ್ಯಾಗಾರ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾಷಾ ಮತ್ತು ಸಾಹಿತ್ಯ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಇಟಾಲಿಕ್ ಶೈಲಿಯ ಸುಂದರ ಬರವಣಿಗೆಯ ತರಬೇತಿ ಕಾರ್ಯಾಗಾರವನ್ನು ಜು.01 ರಂದು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾಂಚನದ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಹರ್ಷ ಕುಮಾರ್ ಕೆ.ಎನ್. ಅವರು, ಇಂಗ್ಲಿಷ್ ಭಾಷೆಯ ಬರವಣಿಗೆಯಲ್ಲಿ ಇಟಾಲಿಕ್ ಶೈಲಿಯ ಮಹತ್ವ ಮತ್ತು ಅದನ್ನು ಸುಂದರವಾಗಿ ಬರೆಯುವ ವಿಧಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡಿದರು. ಅಕ್ಷರಗಳ ವಿನ್ಯಾಸ ಮತ್ತು ಬರವಣಿಗೆಯ ಅಚ್ಚುಕಟ್ಟಿನ ಕುರಿತು ಅವರು ನೀಡಿದ ಮಾಹಿತಿ ವಿದ್ಯಾರ್ಥಿಗಳಿಗೆ ಉಪಯುಕ್ತವಾಯಿತು.
ಮುಖ್ಯೋಪಾಧ್ಯಾಯರು ಹಾಗೂ ಕಾರ್ಯಾಗಾರದ ಮಾರ್ಗದರ್ಶಕರಾದ ಶೀನಪ್ಪ ಗೌಡ ಹಾಗೂ ನಿವೃತ್ತ ಶಿಕ್ಷಕಿ ಶ್ರೀಮತಿ ವಾರಿಜಾ ಹರ್ಷ ಕುಮಾರ್ ಉಪಸ್ಥಿತರಿದ್ದರು.

ಪವನ್ ಕುಮಾರ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ತರಬೇತಿಯ ಕು|| ಜಿತೀಕ್ಷ ವಂದಿಸಿದರು. ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಕಾರ್ಯಾಗಾರದ ಯಶಸ್ಸಿಗೆ ಸಹಕರಿಸಿದರು.

Related posts

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!