23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಉತ್ಸವ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಉತ್ಸವ -2026 ಕಾರ್ಯಕ್ರಮವು ಜೂ. 29, 30 ಮತ್ತು ಜುಲೈ 1 ರಂದು ನಡೆಯಿತು.

ಕಾರ್ಯಕ್ರಮವನ್ನು ಶಾಲಾ, ಸಂಚಾಲಕರು ಮತ್ತು ಮುಖ್ಯ ಅತಿಥಿಗಳು ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ರವರು ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ,ಈ ಪ್ರತಿಭೋತ್ಸವವು ನಿಮ್ಮೆಲ್ಲರಿಗೂ ನಿಮ್ಮಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತರಲು ಮತ್ತು ಪ್ರದರ್ಶಿಸಲು ಒಂದು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪುಂಜಾಲಕಟ್ಟೆ ವಲಯದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಚೇತನ ರವರು ಆಗಮಿಸಿದ್ದರು. ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ನಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅದನ್ನು ಬೆಳೆಸಿಕೊಳ್ಳುವುದು ಬಹಳ ಮುಖ್ಯ ನಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಸಿಗುವ ಪ್ರತಿಯೊಂದು ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಆತ್ಮವಿಶ್ವಾಸದಿಂದ ಮುಂದೆ ಸಾಗಿದರೆ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು .

ಪ್ರತಿಭಾ ಉತ್ಸವದಲ್ಲಿ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಸೇಕ್ರೆಡ್ ಹಾರ್ಟ್ ಚರ್ಚ್ ಮಡಂತ್ಯಾರಿನ ಸಹಾಯಕ ಧರ್ಮ ಗುರುಗಳಾದ ವಂ|ಸ್ವಾ| ಲ್ಯಾರಿ ಪಿಂಟೋ ರವರು, ಶಾಲಾ ಮುಖ್ಯೋಪಾಧ್ಯಾಯವರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು, ಮಡಂತ್ಯಾರು ಚರ್ಚಿನ ಉಪಾಧ್ಯಕ್ಷ ನೆಲ್ಸನ್ ಲಸ್ರಾದೊ ರವರು , ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಸಂಯೋಜಕ ಲಿಯೋ ನೊರೊನ್ಹಾ ರವರು, ಶಿಕ್ಷಕ – ರಕ್ಷಕ ಸಂಘದ ಉಪಾಧ್ಯಕ್ಷ ರವಿಂದ್ರ ರೈ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹಶಿಕ್ಷಕಿ ಮೇರಿ ನಿರೂಪಿಸಿ, ಸೌಮ್ಯಾ ಸ್ವಾಗತಿಸಿ, ಸ್ಟೆಲ್ಲಾ ವಂದಿಸಿದರು.

Related posts

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಅತ್ಯುನ್ನತ ಸಾಧನೆ : ಕಾಲೇಜಿಗೆ ಹೆಮ್ಮೆ ತಂದ ಫಲಿತಾಂಶ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಾದಕ ವಸ್ತು ಮಾರಾಟ ಯತ್ನ: ವಿದೇಶಕ್ಕೆ ತೆರಳಬೇಕಿದ್ದ ಯುವಕ ಜೈಲುಪಾಲು

Suddi Udaya
error: Content is protected !!