23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ, ಕಸ-ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾ. ಪಂ. ಕಾರ್ಯಕ್ಕೆ ಮೆಚ್ಚುಗೆ

ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನದಿ ಸೇರಿದಂತೆ ಹಳ್ಳ , ತೋಡುಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಲಾಯಿಲ ಗ್ರಾಮದ ಪಡ್ಲಾಡಿ ಸಮೀಪ ಹರಿಯುತ್ತಿರುವ ಸೋಮವತಿ ಉಪನದಿಯಲ್ಲಿ ಇರುವ ಕಿಂಡಿ ಅಣೆಕಟ್ಟಿನಲ್ಲಿ ಮರ ಕಸ ಕಡ್ಡಿಗಳು ಸಿಲುಕಿ ನೀರು ಸರಾಗವಾಗಿ ಹರಿಯಲು ಸಮಸ್ಯೆಯಾಗಿ ಪಕ್ಕದ ಕೃಷಿ ಪ್ರದೇಶಗಳಿಗೆ ನೀರು ನುಗ್ಗುವ ಸಂಭವ ಇದ್ದು ಈ ಬಗ್ಗೆ ಸ್ಥಳೀಯರು ಮಾಜಿ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಗಮನಕ್ಕೆ ತಂದಾಗ ಅವರು ಲಾಯಿಲ ಗ್ರಾಮ ಪಂಚಾಯತ್ ಗೆ ಈ ಬಗ್ಗೆ ಮಾಹಿತಿ ನೀಡಿ ತಕ್ಷಣ ತೆರವುಗೊಳಿಸುವ ಬಗ್ಗೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದು,

ಈ ಬಗ್ಗೆ ಪಂಚಾಯತ್ ಅಧಿಕಾರಿಗಳು ಸ್ಪಂದಿಸಿ ಪಂಚಾಯತ್ ವತಿಯಿಂದ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ ಮರ ಸೇರಿದಂತೆ ಇನ್ನಿತರ ಕಸ ಕಡ್ಡಿಗಳನ್ಬು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿದ್ದಾರೆ. ಮನವಿಗೆ ಸ್ಪಂದಿಸಿದ ಪ್ರಸಾದ್ ಶೆಟ್ಟಿ ಹಾಗೂ ಪಂಚಾಯತ್ ಅಧಿಕಾರಿಗಳ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಭಗೀರಥ ಜಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಸಾಂಕ್ರಮಿಕ ರೋಗಗಳ ಜಾಗೃತಿ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ತುಳು ಭಾಷೆ ಅಧಿಕೃತ ಭಾಷೆ ಘೋಷಣೆ: ಸಂತಸ ವ್ಯಕ್ತ ಪಡಿಸಿದ ಶಿವಪ್ರಸಾದ್ ಅಜಿಲರು

Suddi Udaya
error: Content is protected !!