23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರಿನಲ್ಲಿ ಎಸ್‌ಡಿಪಿಐ ವತಿಯಿಂದ ಎಸ್.ಐ.ಆರ್ ಹೆಲ್ಪ್‌ಡೆಸ್ಕ್ ಸೇವೆ ಆರಂಭ

ತೆಂಕಕಾರಂದೂರು: ಎಸ್‌ಡಿಪಿಐ ತೆಂಕಕಾರಂದೂರು ಬ್ರಾಂಚ್ ಸಮಿತಿಯ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ SIR (Special Intensive Revision) ಹೆಲ್ಪ್‌ಡೆಸ್ಕ್ ಸೇವೆಗೆ ಚಾಲನೆ ನೀಡಲಾಯಿತು.

ಈ ಹೆಲ್ಪ್‌ಡೆಸ್ಕ್ ಮೂಲಕ ಮತದಾರರ ಪಟ್ಟಿಗೆ ಹೊಸ ಹೆಸರು ಸೇರ್ಪಡೆ, ಹೆಸರು ಹಾಗೂ ವಿಳಾಸ ತಿದ್ದುಪಡಿ, ಮತದಾರರ ವಿವರಗಳ ಪರಿಶೀಲನೆ ಸೇರಿದಂತೆ ಮತದಾರರ ಪಟ್ಟಿಗೆ ಸಂಬಂಧಿಸಿದ ಎಲ್ಲಾ ರೀತಿಯ ಮಾರ್ಗದರ್ಶನವನ್ನು ಸಾರ್ವಜನಿಕರಿಗೆ ಮುಂದಿನ ಒಂದು ತಿಂಗಳ ಅವಧಿಯವರೆಗೆ ಉಚಿತವಾಗಿ ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ, ಬಳಂಜ ಗ್ರಾಮ ಪಂಚಾಯತ್‌ನ ಎಸ್‌ಡಿಪಿಐ ಬೆಂಬಲಿತ ನಿಕಟಪೂರ್ವ ಸದಸ್ಯ ನಿಝಾಮ್ ಕಟ್ಟೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ ಅಶ್ರಫ್ ಕಟ್ಟೆ, ತೆಂಕಕಾರಂದೂರು ಬ್ರಾಂಚ್ ಅಧ್ಯಕ್ಷ ನವಾಝ್ ಮಂಜೋಟ್ಟಿ ಹಾಗೂ ಪಕ್ಷದ ಕಾರ್ಯಕರ್ತರು, ನಾಗರಿಕರು ಮತ್ತು ಹಿತೈಷಿಗಳು ಉಪಸ್ಥಿತರಿದ್ದರು.

Related posts

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಸುಲ್ಕೇರಿ ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರಿಂದ ಮನವಿ

Suddi Udaya
error: Content is protected !!