23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದು ಪೆರ್ಲ ಬೈಪಾಡಿ ಶಾಲೆಗೆ ವರ್ಗಾವಣೆಗೊಂಡ ಬಜಿಲ ಸ. ಶಾಲೆಯ ಶಿಕ್ಷಕಿ ಜಯಶ್ರೀ ಕೆ ಇವರಿಗೆ ಪೋಷಕರಿಂದ ಬೀಳ್ಕೊಡುಗೆ, ಕಂಪ್ಯೂಟರ್ ಹಸ್ತಾಂತರ


ಕೊಯ್ಯೂರು: ಬಜಿಲ ಸರಕಾರಿ ಶಾಲೆಯಲ್ಲಿ 19 ವರ್ಷಗಳ ಕಾಲ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ಲ ಬೈಪಾಡಿ ಇಲ್ಲಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದು ವರ್ಗಾವಣೆಗೊಂಡ ಶ್ರೀಮತಿ ಜಯಶ್ರೀ ಕೆ ಇವರಿಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಪೋಷಕರ ಮತ್ತು ಊರವರ ಅಭಿಮಾನದ ಬೀಳ್ಕೊಡುಗೆ ಸಮಾರಂಭವು ನೆರವೇರಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಹರೀಶ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕೊಯ್ಯೂರು ಇಲ್ಲಿನ ಪ್ರಾಂಶುಪಾಲರಾದ ಮೋಹನ್ ಗೌಡ, ಪೆರ್ಲ ಬೈಪಾಡಿ ಪ್ರೌಢ ಶಾಲೆಯ ನಿವೃತ್ತ ಸಹಶಿಕ್ಷಕರಾದ ವಿಜಯ ಕುಮಾರ್, ಹರ್ಷ ಗೆಳೆಯರ ಬಳಗ ಬಜಿಲ ಅಧ್ಯಕ್ಷ ರಾಮಣ್ಣ ಗೌಡ, ದಾಮೋದರ ಗೌಡ ಬೆರ್ಕೆ, ಕೂಸಪ್ಪ ಪೂಜಾರಿ, ಮೋಹನದಾಸ ಬಜಿಲ, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಜಗದೀಶ್ ಗೌಡ, ಶಾಲಾ ಹಿರಿಯ ವಿದ್ಯಾರ್ಥಿ ವಿವೇಕ್, ಹಿಂದೆ ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಶ್ರೀಮತಿ ರೀಮಾ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಕುಸುಮಾವತಿ, ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ, ಸಹಶಿಕ್ಷಕರುಗಳಾದ ಶ್ರೀಮತಿ ಸೌಮ್ಯ, ಶ್ರೀಮತಿ ಕುಸುಮಾವತಿ, ಶ್ರೀಮತಿ ದೀಪಿಕಾ, ಅಡುಗೆ ಸಿಬ್ಬಂದಿ ಶ್ರೀಮತಿ ಸುಶೀಲಾ ಮತ್ತು ಶಾಲಾ ನಾಯಕಿ ಕುಮಾರಿ ಚಿರಶ್ರೀ ಹಾಗೂ ಶಾಲಾ ಪೋಷಕರು, ಊರವರು ಉಪಸ್ಥಿತರಿದ್ದರು.

ವರ್ಗಾವಣೆಗೊಂಡ ಶ್ರೀಮತಿ ಜಯಶ್ರೀ ಇವರು ಶಾಲೆಗೆ ಕಂಪ್ಯೂಟರ್ ನ್ನು ಕೊಡುಗೆಯಾಗಿ ನೀಡಿದರು.
ಶ್ರೀಮತಿ ಸೌಮ್ಯ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಸ್ವಾಗತಿಸಿ, ಕುಸುಮಾವತಿ ವಂದನಾರ್ಪಣೆ ಸಲ್ಲಿಸಿದರು. ಶಾಲಾ ಗೌರವ ಶಿಕ್ಷಕಿ ಶ್ರೀಮತಿ ದೀಪಿಕಾ ಅಭಿನಂದನಾ ಪತ್ರ ವಾಚಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

Suddi Udaya

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲಾ ಮಕ್ಕಳಿಗೆ ಶಾಲಾ ಹಳೆವಿದ್ಯಾರ್ಥಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

Suddi Udaya
error: Content is protected !!