23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ “ಯಶಸ್ವಿ ನಿರ್ವಹಣಾ ತತ್ವಗಳ” ಕುರಿತು ವಿಶೇಷ ಮಾರ್ಗದರ್ಶನ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ದಿನಾಂಕ 30-06-2026 ರಂದು ದ್ವಿತೀಯ ಪದವಿ ಪೂರ್ವ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ‘ನಿರ್ವಹಣೆಯ ತತ್ವಗಳು’ ವಿಷಯದ ಕುರಿತು ಶೈಕ್ಷಣಿಕ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ನಿರ್ವಹಣೆಯ ತತ್ವಗಳ ಬಗ್ಗೆ ಅರಿವು ಮೂಡಿಸುವುದು, ವಿಷಯದ ಮೇಲಿನ ಆಸಕ್ತಿಯನ್ನು ಹೆಚ್ಚಿಸುವುದು ಹಾಗೂ ಪ್ರಸ್ತುತಿಕರಣ ಕೌಶಲ್ಯವನ್ನು ಬೆಳೆಸುವ ಉದ್ದೇಶ ಹೊಂದಲಾಗಿತ್ತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನಿರ್ವಹಣೆಯ ವಿವಿಧ ತತ್ವಗಳನ್ನು ಸರಳವಾಗಿ ಹಾಗೂ ಆತ್ಮವಿಶ್ವಾಸದಿಂದ ಪ್ರಸ್ತುತಪಡಿಸಿದರು. ಇದರಿಂದ ವಿದ್ಯಾರ್ಥಿಗಳಲ್ಲಿ ವಿಷಯದ ಬಗ್ಗೆ ಹೆಚ್ಚಿನ ತಿಳುವಳಿಕೆ, ಆತ್ಮವಿಶ್ವಾಸ ಮತ್ತು ಸಾರ್ವಜನಿಕವಾಗಿ ಮಾತನಾಡುವ ಕೌಶಲ್ಯ ವೃದ್ಧಿಯಾಯಿತು.
ಕಾರ್ಯಕ್ರಮವನ್ನು ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಮತಿ ದೀಕ್ಷಿತಾ ಎ. ಅವರು ಯಶಸ್ವಿಯಾಗಿ ನಡೆಸಿಕೊಟ್ಟರು.

Related posts

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya
error: Content is protected !!