23.7 C
ಪುತ್ತೂರು, ಬೆಳ್ತಂಗಡಿ
October 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ ಬಂಧನ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ದಾಖಲಾಗಿದ್ದ (ಕ್ರೈಂ ನಂ. 164/2018) ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಎಸ್‌.ಸಿ. ನಂ. 68/2022 ಪ್ರಕರಣದ ವಿಚಾರಣೆಗೆ ಸುಮಾರು ನಾಲ್ಕು ತಿಂಗಳಿನಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೆಂಪಕೋಡಿ ನಿವಾಸಿ ಕುಂಯಾ ಅವರ ಪುತ್ರ ಆನಂದ (40) ಎಂದು ಗುರುತಿಸಲಾಗಿದೆ. ಈ ಪ್ರಕರಣವು ಐಪಿಸಿ ಕಲಂ 341, 324, 504, 506, 307 ಹಾಗೂ 34ರ ಅಡಿಯಲ್ಲಿ ದಾಖಲಾಗಿದ್ದು, ವ್ಯಕ್ತಿಯನ್ನು ಅಡ್ಡಗಟ್ಟಿ, ಅವಮಾನಿಸಿ, ಜೀವ ಬೆದರಿಕೆ ಹಾಕಿ, ಬಳಿಕ ಆಯುಧದಿಂದ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಿದ ಆರೋಪ ಇದಾಗಿದೆ.

ಬೆಳ್ತಂಗಡಿ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಹಾಗೂ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್ ಅವರ ತಂಡ ಜುಲೈ 4ರಂದು ಬೆಳಿಗ್ಗೆ ಕೊಕ್ಕಡದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.ಬಳಿಕ ಆರೋಪಿಯನ್ನು ಮಂಗಳೂರು ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಯಿಂದ ರೂಪಾಯಿ 500 ದಂಡ ಪಾವತಿಸಿಕೊಂಡು, ಸೂಕ್ತ ಭದ್ರತೆಯೊಂದಿಗೆ ಬಿಡುಗಡೆ ಮಾಡಿದೆ.

Related posts

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya
error: Content is protected !!