23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳ ಮಾಸಿಕ ಸಭೆ

ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳ ಮಾಸಿಕ ಸಭೆಯನ್ನು ಶಾಲೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜು.03 ರಂದು ನಡೆಸಲಾಯಿತು.

ಸಭೆಯಲ್ಲಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ಕಲಿಕಾ ಪ್ರಗತಿ, ಪುನರ್ವಸತಿ ಕಾರ್ಯಕ್ರಮಗಳು, ಹಾಜರಾತಿ, ಶಾಲಾ ದಾಖಲೆಗಳ ನಿರ್ವಹಣೆ, ಸ್ವಚ್ಛತೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಜೊತೆಗೆ ಜುಲೈ ತಿಂಗಳಲ್ಲಿ ನಡೆಯಲಿರುವ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳು, ವಿಶೇಷ ದಿನಗಳ ಆಚರಣೆ, ಪೋಷಕರ ಸಹಭಾಗಿತ್ವ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಯೋಜನೆಗಳ ಕುರಿತು ಸಿಬ್ಬಂದಿಗಳೊಂದಿಗೆ ಅಭಿಪ್ರಾಯ ವಿನಿಮಯ ನಡೆಯಿತು.

ಶಾಲಾ ನಿರ್ದೇಶಕರು ಆದಂತಹ ವಂದನೀಯ ಫಾ| ವಿನೋದ್ ಮಸ್ಕರೆನ್ಹಸ್ ರವರು ಶಾಲೆಯ ಅಭಿವೃದ್ಧಿಗೆ ಎಲ್ಲ ಸಿಬ್ಬಂದಿಗಳು ತಂಡದ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಲಾಯಿತು. ಸಭೆಯಲ್ಲಿ ಸಿಬ್ಬಂದಿಗಳು ತಮ್ಮ ಸಲಹೆ-ಸೂಚನೆಗಳನ್ನು ಹಂಚಿಕೊಂಡಿದ್ದು, ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣ ಹಾಗೂ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಬದ್ಧತೆಯಿಂದ ಕಾರ್ಯನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಸಭೆಯಲ್ಲಿ ಶಾಲೆಯ ಎಲ್ಲಾ ವಿಶೇಷ-ಶಿಕ್ಷಕರು, ಆಪ್ತ ಸಮಾಲೋಚಕರು, ಫಿಜಿಯೋಥೆರಪಿಸ್ಟ್, ವಾಕ್ ಮತ್ತು ಶ್ರಾವಣ ತೆರಪಿಸ್ಟ್ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಾಲಾ ವಿಶೇಷ ಶಿಕ್ಷಕಿ ಧನ್ಯ ಕೆ ವಿ ಸ್ವಾಗತಿಸಿ, ಶಿಕ್ಷಕಿಯಾದ ರಶ್ಮಿ ವಂದಿಸಿದರು.

Related posts

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗೆ ರೂ.91ಲಕ್ಷ ಕೊರತೆ : ಶಾಸಕ ಹರೀಶ್ ಪೂಂಜರವರು ರೂ.1 ಕೋಟಿ 5 ಲಕ್ಷ ಅನುದಾನ ನೀಡಿದ್ದು ದೇಗುಲದ ಅಭಿವೃದ್ಧಿಗೆ ಬಳಕೆಯಾಗಿದೆ: ದೇವಾಲಯ ಸಂಪೂರ್ಣ ಋಣ ಮುಕ್ತವಾಗಬೇಕು : ಪುರುಷೋತ್ತಮ ರಾವ್

Suddi Udaya

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ: ಸಾಧಕ ನವಜೀವನ ಸದಸ್ಯರಿಗೆ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಕ -ರಕ್ಷಕ ಸಂಘದ ವಾರ್ಷಿಕ ಸಭೆ

Suddi Udaya
error: Content is protected !!