23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಇದರ ವತಿಯಿಂದ ಜು.4 ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆಯನ್ನು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕರಾಮ್ ಬಿ. ವಹಿಸಿದ್ದರು. ದಾಂಡೇಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂದೇಶ್ ಜೈನ್ ವಿಶೇಷ ಉಪನ್ಯಾಸ ನೀಡಿದರು.

ಮುಖ್ಯ ಅತಿಥಿಗಳಾಗಿ ಮೆಸ್ಕಾಂ, ಮಂಗಳೂರು ಇದರ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಂಜುವಾಣಿ ಮಾಸಪತ್ರಿಕೆ ಸಂಪಾದಕ ಭಾಸ್ಕರ್ ಹೆಗಡೆ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು ಇದರ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಪತ್ರಕರ್ತರ ಸಂಘದ ಜಿಲ್ಲಾ ಗ್ರಾಮೀಣ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬೆಳ್ತಂಗಡಿ ತಾಲೂಕು ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಸಾಧಕ ವಿದ್ಯಾರ್ಥಿಗಳನ್ನು ಸಂಘದ ವತಿಯಿಂದ ಅಭಿನಂದಿಸಲಾಯಿತು. ಪತ್ರಕರ್ತ ಮನೋಹರ ಇವರ ಪುತ್ರಿ ದಿತಿ ಇವರ ಸಾಂತ್ವಾನ ನಿಧಿಯಿಂದ ಅನಾರೋಗ್ಯ ಪೀಡಿತರ ಚಿಕಿತ್ಸೆಗೆ ನೆರವು ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಮಂಜುವಾಣಿ ಸಂಪಾದಕ ಭಾಸ್ಕರ ಹೆಗಡೆ ಹಾಗೂ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಇವರನ್ನು ಗೌರವಿಸಲಾಯಿತು.

ಪತ್ರಕರ್ತರ ಸಂಘದ ಕಾರ್ಯದರ್ಶಿ ಮನೋಹರ್ ಬಳಂಜ ಸ್ವಾಗತಿಸಿದರು. ಅಚುಶ್ರೀ ಬಾಂಗೇರು, ಸಂತೋಷ್ ಪಿ. ಕೋಟ್ಯಾನ್, ಬಿ.ಎಸ್ ಕುಲಾಲ್ ಸನ್ಮಾನಿತರನ್ನು ಪರಿಚರಿಸಿದರು. ಆಶ್ರಫ್ ಆಲಿಕುಂಞಿ ಕಾರ್ಯಕ್ರಮ ನಿರೂಪಿಸಿ, ಅರವಿಂದ ಹೆಬ್ಬಾರ್, ಮಂಜುನಾಥ ರೈ, ಧನಕೀರ್ತಿ ಆರಿಗ, ಹೃಷಿಕೇಶ್ ಧರ್ಮಸ್ಥಳ, ದೇವಿಪ್ರಸಾದ್, ಶ್ರೀನಿವಾಸ ತಂತ್ರಿ, ಪ್ರಸಾದ್ ಶೆಟ್ಟಿ, ಕೆ.ಎನ್ ಗೌಡ, ಸಂಜೀವ ಎನ್.ಸಿ, ಜಾರಪ್ಪ ಪೂಜಾರಿ, ಚಂದ್ರಹಾಸ ಚಾರ್ಮಾಡಿ ಶಾಸಕರು ಹಾಗೂ ಅತಿಥಿಗಳನ್ನು ಗೌರವಿಸಿದರು. ಸಂಘದ ಕಾರ್ಯದರ್ಶಿ ಶಿಬಿ ಧರ್ಮಸ್ಥಳ ಧನ್ಯವಾದವಿತ್ತರು.

Related posts

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya
error: Content is protected !!