23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ಪಿ ಯು ಕಾಲೇಜಿನಲ್ಲಿ ನಡೆದ “ಶೃಂಗ” ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

ಗುರುವಾಯನಕೆರೆ: “ಎಕ್ಸೆಲ್ ಪದವಿಪೂರ್ವ ಕಾಲೇಜು ರಾಜ್ಯದ ಪ್ರತಿಷ್ಠಿತ ಕಾಲೇಜುಗಳ ಪಟ್ಟಿಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮಲ್ಲಿರುವ ಸಾಮರ್ಥ್ಯವನ್ನು ಅರಿತು ಆತ್ಮಶಕ್ತಿಯ ಮೂಲಕ ಮುನ್ನಡೆದರೆ ಸಾಧನೆಗೆ ಮೊದಲಿಗರಾಗಬಹುದು ಸಾಧನೆಯ ಕನಸನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಎಕ್ಸೆಲ್ ಪಿಯು ಕಾಲೇಜ್ ರೆಕ್ಕೆಯಾಗಬಲ್ಲದು ಎಂದು ಸಂಪನ್ಮೂಲ ವ್ಯಕ್ತಿಗಳು, ರಾಷ್ಟ್ರ ಮಟ್ಟದ ಜೆ ಸಿ ತರಬೇತುದಾರರು ಹಾಗೂ ಖ್ಯಾತ ವಾಗ್ಮಿಗಳಾದ ಕೆ. ರಾಜೇಂದ್ರ ಭಟ್ ತಿಳಿಸಿದರು.

ಎಕ್ಸೆಲ್ ಪಿ ಯು ಕಾಲೇಜು ಗುರುವಾಯನಕೆರೆ, ಇಲ್ಲಿ ನಡೆದ ಶೃಂಗ ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಕ್ಸೆಲ್ ಪಿಯು ಕಾಲೇಜ್ ಕಡಿಮೆ ಅವಧಿಯಲ್ಲಿ ಇಷ್ಟೊಂದು ದೊಡ್ಡ ದೊಡ್ಡ ಸಾಧನೆಗಳನ್ನು ಮಾಡುತ್ತಾ ಬಂದಿದೆ ಎಂದು ಅಧ್ಯಕ್ಷ ಸುಮಂತ್ ಕುಮಾರ್ ಅವರ ಶೈಕ್ಷಣಿಕ ಕಾರ್ಯವನ್ನು ಪ್ರಶಂಸಿದ್ದರು.

ಇದೇ ಸಂದರ್ಭದಲ್ಲಿ ಮಂಗಳೂರಿನ ವಿದ್ಯಾರ್ಥಿ ಸೋಶಿಯಲ್ ಎಜುಕೇಶನ್ ಸೊಸೈಟಿಯು ಎಕ್ಸೆಲ್‌ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ 2026ನೇ ಸಾಲಿನ ವಿದ್ಯಾ ಸಿರಿ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

“ಪ್ರಶಸ್ತಿಗಳು ತಮ್ಮೆಲ್ಲರ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ. ನನ್ನ ಕನಸುಗಳಿಗೆ ಬೆಂಬಲವಾಗಿ ನಿಂತಿರುವವರು ಪ್ರಾಚಾರ್ಯರು, ಬೋಧಕ ಸಿಬ್ಬಂದಿ ಮತ್ತು ಬೋಧಕೇತರ ಸಿಬ್ಬಂದಿಯವರು. ಎಲ್ಲರ ಸಹಕಾರದಿಂದ ನಾನು ಮತ್ತಷ್ಟು ನಿಸ್ವಾರ್ಥ ಸೇವೆಯನ್ನು ಮಾಡುತ್ತೇನೆ” ಎಂದು ಸುಮಂತ್ ಕುಮಾರ್ ಜೈನ್ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಹೇಳಿದರು.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಚಾಲನೆ ನೀಡಿದರು. ಪ್ರಾಚಾರ್ಯರಾದ ಡಾ. ಪ್ರಜ್ವಲ್ ಸ್ವಾಗತಿಸಿ, ಉಪ ಪ್ರಾಚಾರ್ಯರಾದ ಹರೀಶ್ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ಪ್ರಸನ್ನ ಭೋಜ, ಅರುಣ್ ಕ್ರಾಸ್ಟೋಲಿನ್ , ಅನನ್ಯ ಜೈನ್ ಮತ್ತು ಕನ್ನಡ ಉಪನ್ಯಾಸಕ ಮೊಹಮ್ಮದ್ ಮುನೀರ್ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಡಾ. ನವೀನ್ ಕುಮಾರ್ ಮರಿಕೆ, ಉಪಪ್ರಾಚಾರ್ಯರ ರೋಹಿತ್ ಕುಮಾರ್, ಕೀರ್ತಿನಿಧಿ ಜೈನ್, ಸಂಯೋಜಕರಾದ ನಿಶಾ ಪೂಜಾರಿ, ಶ್ರೀನಿಧಿ, ನಿಲಯ ಮೇಲ್ವಿಚಾರಕರಾದ ಮಲ್ಲೇಶ್ ಜೈನ್, ವಿಭಾಗದ ಮುಖ್ಯಸ್ಥರು, ಉಪನ್ಯಾಸಕ ವರ್ಗ, ವಿದ್ಯಾರ್ಥಿಗಳು, ಪೋಷಕರು ಮತ್ತು ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya
error: Content is protected !!