23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಬೆಳ್ತಂಗಡಿ : ಹಳೆಕೋಟೆಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭವು ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತರು ಹಾಗೂ ಅಂಕಣಕಾರರು, ರಾಘವ ಶರ್ಮಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ನಾಯಕತ್ವ, ಶಿಸ್ತು, ಸಾಮಾಜಿಕ ಹೊಣೆಗಾರಿಕೆ ಹಾಗೂ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸಮಾಜಕ್ಕೆ ಆದರ್ಶಪ್ರಾಯ ನಾಗರಿಕರಾಗಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ ಹಾಗೂ ಜೊತೆ ಕಾರ್ಯದರ್ಶಿಗಳಾದ ಶ್ರೀನಾಥ್ ಕೆ.ಎಂ. ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಮತ್ತು ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷೀ ನಾರಾಯಣ್. ಕೆ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಅವರು ಅತಿಥಿಗಳನ್ನು ಸ್ವಾಗತಿಸಿ ಪ್ರಮಾಣ ವಚನ ಬೋದಿಸಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ಹೇಮಲತಾ ಎಂ. ಅವರು ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು.

ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಮೋಹಿತ್ ಗೌಡ, ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಅನಿಷ, ಕ್ರೀಡಾ ಕಾರ್ಯದರ್ಶಿಯಾಗಿ ದ್ವಿತೀಯ ವಾಣಿಜ್ಯ ವಿಭಾಗದ ನಿಶ್ಚಿತ್, ಸೈನ್ಸ್ ಕ್ಲಬ್ ಲೀಡ್ ಆಗಿ ದ್ವಿತೀಯ ವಿಜ್ಞಾನ ವಿಭಾಗದ ಆಲ್ವಿನ್ ಜೋಸೆಫ್, ಕಾಮರ್ಸ್ ಕ್ಲಬ್ ಲೀಡ್ ಆಗಿ ದ್ವಿತೀಯ ವಾಣಿಜ್ಯ ವಿಭಾಗದ ವಂಶಿತ್, ಲೀಗಲ್ ಲಿಟರಸಿ ಕ್ಲಬ್ ಲೀಡ್ ಆಗಿ ದ್ವಿತೀಯ ಕಲಾ ವಿಭಾಗದ ಸುಮಶ್ರೀ, ಐಟಿ ಕ್ಲಬ್ ಲೀಡ್ ಆಗಿ ದ್ವಿತೀಯ ವಿಜ್ಞಾನ ವಿಭಾಗದ ಅನೀಶ್, ಸ್ಕಿಲ್ ಕ್ಲಬ್ ಲೀಡ್ ಆಗಿ ದ್ವಿತೀಯ ವಾಣಿಜ್ಯ ವಿಭಾಗದ ಸಮೃದ್, ರೆಡ್ ಕ್ರಾಸ್ ಲೀಡ್ ಆಗಿ ದ್ವಿತೀಯ ವಿಜ್ಞಾನ ವಿಭಾಗದ ಮನೀಶ್, ಲಿಟರಸಿ ಮತ್ತು ಕಲ್ಚರಲ್ ಕ್ಲಬ್ ಲೀಡ್ ಆಗಿ ದ್ವಿತೀಯ ವಾಣಿಜ್ಯ ವಿಭಾಗದ ಪಂಚಮಿ, ಎನ್.ಎಸ್.ಎಸ್. ಲೀಡ್‌ಗಳಾಗಿ ದ್ವಿತೀಯ ಕಲಾ ವಿಭಾಗದ ಇಂದುಮತಿ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಕೈಲಾಶ್, ರೋವರ್ಸ್ ಮತ್ತು ರೇಂಜರ್ಸ್ ಲೀಡ್‌ಗಳಾಗಿ ದ್ವಿತೀಯ ವಾಣಿಜ್ಯ ವಿಭಾಗದ ಯಶ್ವಿಥ್ ಹಾಗೂ ತನ್ವಿ ಅವರು ಪ್ರಮಾಣವಚನ ಸ್ವೀಕರಿಸಿದರು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹಿತ್ ಗೌಡ ಅವರು ಧನ್ಯವಾದ ಸಲ್ಲಿಸಿದರು.

ಕನ್ನಡ ವಿಭಾಗದ ಮುಖ್ಯಸ್ಥ ಮಹಾಬಲ ಗೌಡ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು .

Related posts

ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್

Suddi Udaya

ಪತ್ನಿ ಚಿನ್ನಮ್ಮ ರವರ ಶವ ಕೆರೆಯಲ್ಲಿ ಪತ್ತೆಯಾದ ಐದು ದಿನದ ಬಳಿಕ ಪತಿ ತನಿಯಪ್ಪ ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya

ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾದ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಿದ ಶಾಸಕ ಹರೀಶ್ ಪೂಂಜ: ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ

Suddi Udaya
error: Content is protected !!