23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜು.12: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ 350 ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 586 ನೇ ಸೇವಾ ಯೋಜನೆ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ 350 ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣಾ ಕಾರ್ಯಕ್ರಮ ಜು.12ರಂದು ಕುತ್ತ್ಯಾರು ಹೊಸಮನೆ ಶ್ರೀ ಸಹ ಪರಿವಾರ ನಾಗಬ್ರಹ್ಮಾದಿ ಕ್ಷೇತ್ರ ರೆಂಕೆದಗುತ್ತು ಇಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಜಗದೀಶ್ ಲಾಯಿಲ ವಹಿಸಲಿದ್ದು,
ಸಭಾಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಬಿ ಸುವರ್ಣ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿದ್ಯುತ್ ಮಂಡಳಿ ಅಧ್ಯಕ್ಷ ಹರೀಶ್ ಕುಮಾರ್, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ, ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಉಪನಿರೀಕ್ಷಕ ಕಿಶೋರ್ ಗೌಡ, ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಪ್ರವೀಣ್ ಫೆರ್ನಾಂಡಿಸ್ ಮಾಲಕರು ಹಳ್ಳಿ ಮನೆ ಉಜಿರೆ, ರಂಗ್ ದ ರಾಜೆ ಖ್ಯಾತಿಯ ಸುಂದರ್ ರೈ ಮಂದಾರ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ್ ಬಿ, ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ವರದಿಗಾರರು ಮನೋಹರ್ ಬಳಂಜ,
ಖಾಸಗಿ ಬಸ್ ನೌಕರರ ಸಂಘ ಜಿಲ್ಲಾಧ್ಯಕ್ಷ ಸಿದ್ದಿಕ್ ಕೆಂಪಿ ಉಪ್ಪಿನಂಗಡಿ, ಸಿರಿಲ್ ಡಿಸೋಜ ಮಾಲಕರ ಸಂಗಮ್ ಸ್ಟೋರ್ ರೆಂಕೆದಗುತ್ತು, ದಿನೇಶ್ ಶೆಟ್ಟಿ ಜ್ಯೂಸ್ ಜಂಕ್ಷನ್ ಬೆಳ್ತಂಗಡಿ, ರಾಜ ಕೇಸರಿ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಶರತ್ ಕರಾಯ, ಭಾಗವಹಿಸಲಿದ್ದಾರೆ.

ಸದಾ ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಶಿಕ್ಷಣ ಆರೋಗ್ಯ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದ್ದು
ಕಳೆದ ಸಲ ಬೆಳ್ತಂಗಡಿ ತಾಲೂಕಿನ 300 ಮಕ್ಕಳಿಗೆ ಪುಸ್ತಕ ಬ್ಯಾಗ್ ವಿತರಣೆ ಮಾಡಿದ್ದು ಈ ಸಲ 350 ಮಕ್ಕಳಿಗೆ ಪುಸ್ತಕ ಬ್ಯಾಗ್ ವಿತರಣೆ ಮಾಡಲಿದ್ದೇವೆ ಎಂದು ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ತಿಳಿಸಿದ್ದಾರೆ.

Related posts

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Suddi Udaya
error: Content is protected !!