30.9 C
ಪುತ್ತೂರು, ಬೆಳ್ತಂಗಡಿ
October 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ವೇಣೂರು: ದ್ವಿಚಕ್ರ ವಾಹನಕ್ಕೆ ಗೂಡ್ಸ್ ರಿಕ್ಷಾ ಡಿಕ್ಕಿಯೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿ ನಿಟ್ಟಡೆ ಬಳಿ ಜು. 5ರ ರಾತ್ರಿ ನಡೆದಿದೆ.

ವೇಣೂರು ಗ್ರಾ.ಪಂ. ವ್ಯಾಪ್ತಿಯ ಕರಿಮಣೇಲು ಗ್ರಾಮದ ಗಾಂಧಿನಗರ ತಿಮರಡ್ಡ ಮನೆ ನಿವಾಸಿ ರವೀಂದ್ರ ಮೂಲ್ಯ (47ವ) ಈ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಮತ್ತೋರ್ವ ಸಹೋದರ ಜಗದೀಶ್ ಮೂಲ್ಯ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಹಿನ್ನೆಲೆ:
ಗಾರೆ ಕೆಲಸ ಮಾಡಿಕೊಂಡಿದ್ದ ಸಹೋದರರು ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಗುರುವಾಯನಕೆರೆಯಿಂದ ವೇಣೂರು ಕಡೆಗೆ ಬರುತ್ತಿದ್ದ ವೇಳೆ ವೇಣೂರಿನಿಂದ ಹೋಗುತ್ತಿದ್ದ ಗೂಡ್ಸ್ ರಿಕ್ಷಾ ನಿಟ್ಟಡೆಯ ಕುಂಭಶ್ರೀ ಶಾಲಾ ಬಳಿ ಮುಖಾಮುಖಿ ಡಿಕ್ಕಿಯೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಪಲ್ಟಿಯಾಗಿದ್ದು, ರವೀಂದ್ರ ಮೂಲ್ಯ ಅವರ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದರೆ. ಜಗದೀಶ್ ಮೂಲ್ಯ ಅವರಿಗೆ ಕಾಲುಗಳಿಗೆ ಬಲವಾದ ಗಾಯಗಳಾಗಿವೆ. ರಿಕ್ಷಾ ಚಾಲಕ ಹಾಗೂ ಸ್ಥಳೀಯರು ಸೇರಿ ಗಾಯಾಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ.

ವೇಣೂರಿನಲ್ಲಿ ತರಕಾರಿ ಅಂಗಡಿ ನಡೆಸುತ್ತಿರುವ ಪುತ್ತುಮೋನು ಎಂಬವರ ಗೂಡ್ಸ್ ರಿಕ್ಷಾ ಆಗಿದ್ದು, ರಾತ್ರಿ ಅಂಗಡಿಯಿಂದ ಕೆಲಸ ಮುಗಿಸಿ ಮನೆಗೆ ಕಡೆಗೆ ತೆರಳುತ್ತಿದ್ದು, ನಿಟ್ಟಡೆಯಲ್ಲಿ ಹೆದ್ದಾರಿಯಲ್ಲಿದ್ದ ಸಣ್ಣ ಗುಂಡಿಯೊಂದನ್ನು ತಪ್ಪಿಸುವ
ಈ ದುಘ೯ಟನೆ ನಡೆದಿದೆ ಎನ್ನಲಾಗಿದೆ.
ಮೃತ ರವೀಂದ್ರ ಅವರು ತಾಯಿ ಬಾಗಿ, ಪತ್ನಿ ಭವಾನಿ, ಪುತ್ರ ಸ್ವಸ್ತಿಕ್, ಸಹೋದರರು, ಸಹೋದರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಜಲಾನಯನ ಮಹೋತ್ಸವ ಅಭಿಯಾನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya
error: Content is protected !!