23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ.

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆಯನ್ನು ಜು. 4 ರಂದು ಶಾಲಾ ಸಭಾಂಗಣದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು.

ವಿದ್ಯಾರ್ಥಿನಿಯಾದ ಮನ್ವಿತಾ ನಾಯಕ್ ವನಮಹೋತ್ಸವದ ಮಹತ್ವದ ಬಗ್ಗೆ ವಿವರಣೆ ನೀಡಿದರು. ವಿದ್ಯಾರ್ಥಿಗಳು ಹಾಡು, ನೃತ್ಯ, ನಾಟಕದ ಮೂಲಕ ವನಮಹೋತ್ಸವದ ಮಹತ್ವವನ್ನು ಪ್ರದರ್ಶಿಸಿದರು.

ಮುಖ್ಯ ಅತಿಥಿಗಳಾಗಿ ಜಯಪ್ರಸಾದ್ ಡಿ.ಕೆ ಕಡಮ್ಮಾಜೆ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಒಂದು ತೋಟವನ್ನು ಬೆಳೆಸಲು ಹೆಚ್ಚಿನ ಕಾಳಜಿ ಮತ್ತು ಪ್ರೀತಿಯ ಅಗತ್ಯವಿದೆ. ವನಮಹೋತ್ಸವದ ಬಗ್ಗೆ ಪ್ರತಿಯೊಬ್ಬರಲ್ಲೂ ಭಾವನಾತ್ಮಕ ಬಾಂಧವ್ಯ ಇರಬೇಕು ಎಂದು ಹೇಳಿ, ಮಕ್ಕಳಿಗೆ ವನಮಹೋತ್ಸವದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮಕ್ಕೆ ಸೇಕ್ರೆಡ್ ಹಾರ್ಟ್ ಚರ್ಚ್ ಮಡಂತ್ಯಾರಿನ ಸಹಾಯಕ ಧರ್ಮ ಗುರುಗಳಾದ ವಂ|ಸ್ವಾ| ಲ್ಯಾರಿ ಪಿಂಟೋ ರವರು ಆಗಮಿಸಿ, ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ನಾವು ಬೆಳೆಯುತ್ತಿದ್ದಂತೆ ನಮ್ಮ ಪ್ರಕೃತಿಯನ್ನು ಎಂದಿಗೂ ಮರೆಯಬಾರದು ಎಂದು ಹೇಳಿದರು. ಒಂದು ಮರವನ್ನು ನೆಟ್ಟರೆ ಅದು ನಮಗೆ ಅಮೂಲ್ಯವಾದ ಆಮ್ಲಜನಕವನ್ನು ನೀಡುತ್ತದೆ. ಎಂದು ಹೇಳಿ ಮಕ್ಕಳಿಗೆ ವನಮಹೋತ್ಸವದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸ , ಮಡಂತ್ಯಾರು ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ನೆಲ್ಸನ್ ಲಸ್ರಾದೋ , ಶಿಕ್ಷಕ- ರಕ್ಷಕ ಸಂಘದ ಉಪಾಧ್ಯಕ್ಷ ರವಿಂದ್ರ ರೈ ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ಸುಹಾ ಫಾತಿಮಾ ರವರು ಕಾರ್ಯಕ್ರಮವನ್ನು ನಿರೂಪಿಸಿ, ರಿತಿಕಾ ಶೆಣೈ ಸ್ವಾಗತಿಸಿ, ಆದ್ಯ ಜೆ ಧನ್ಯವಾದವನ್ನು ಸಮರ್ಪಿಸಿದರು.ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಕ- ಶಿಕ್ಷಕೇತರ ವೃಂದದವರು ಸಹಕರಿಸಿದರು.

Related posts

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ಇನ್ನು 24 x 7 ವಿಶೇಷ ಪರಿಣತಿ ಹೊಂದಿದ  ಮೂಳೆ ತಜ್ಞರು ಲಭ್ಯ

Suddi Udaya
error: Content is protected !!