32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 2026–27ನೇ ಸಾಲಿನ ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಎಸ್‌ಡಿಎಂ ಸ್ವಾಯತ್ತ ಕಾಲೇಜು, ಉಜಿರೆಯ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ್ ಪಿ. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡಲು ಶಿಸ್ತು, ಬದ್ಧತೆ ಹಾಗೂ ನಿರಂತರ ಪರಿಶ್ರಮ ಅತ್ಯಗತ್ಯವಾಗಿದ್ದು, ಕ್ರೀಡಾಪಟುಗಳು ತಮ್ಮ ಪ್ರತಿಭೆಯನ್ನು ಉತ್ತಮ ರೀತಿಯಲ್ಲಿ ಬೆಳೆಸಿಕೊಂಡು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್‌.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್. ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭಾಶಯಗಳನ್ನು ತಿಳಿಸಿ, ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕಿ ಶಾರದಾ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ತೃತೀಯ ಬಿ.ಎ. ವಿದ್ಯಾರ್ಥಿನಿ ತನುಶ್ರೀ ನಿರೂಪಿಸಿ, ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಪ್ರಿಯಾಂಕ ಸ್ವಾಗತಿಸಿದರು. ತೃತೀಯ ಬಿ.ಎ. ವಿದ್ಯಾರ್ಥಿ ಪ್ರವೀಣ್ ವಂದನಾರ್ಪಣೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕ್ರೀಡಾ ಸಂಘದ ವಿವಿಧ ಕ್ರೀಡೆಗಳ ತರಬೇತುದಾರರಾದ ಕೃಷ್ಣಾನಂದ ರಾವ್, ಸಂದೇಶ್, ಸಂಜೀವ ಕುಲಾಲ್, ಸುದೀನ್ ಪುಜಾರಿ , ಜಸ್ವಂತ್ ಹಾಗೂ ವೀಕ್ಷಿತಾ ಹೆಮೋದರ್ ಸೇರಿದಂತೆ ಸಂಸ್ಥೆಯ ಕ್ರೀಡಾ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Related posts

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

Suddi Udaya

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶ್ರೀ ನಾಳ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!