23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ತೂಗುಸೇತುವೆಗಳ ಸರದಾರ” ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ ನಿಧನ

ಬೆಳ್ತಂಗಡಿ: ದೇಶಾದ್ಯಂತ “ತೂಗುಸೇತುವೆಗಳ ಸರದಾರ” ಎಂದೇ ಖ್ಯಾತಿ ಪಡೆದಿದ್ದ, ಪದ್ಮಶ್ರೀ ಪುರಸ್ಕೃತ ಹಿರಿಯ ಸೇತುವೆ ತಜ್ಞ ಡಾ. ಗಿರೀಶ್ ಭಾರದ್ವಾಜ (76) ಅವರು ಇಂದು (ಜು.7) ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇತ್ತೀಚೆಗಷ್ಟೇ ಉತ್ತರ ಕನ್ನಡ ಜಿಲ್ಲೆಯ ದೇವಸ್ಥಾನಗಳಿಗೆ ಭೇಟಿ ನೀಡಿ ಮರಳಿದ್ದ ಅವರಿಗೆ, ಕಳೆದ ಕೆಲ ದಿನಗಳಿಂದ ಹೃದಯ ಸಂಬಂಧಿತ ಅನಾರೋಗ್ಯ ಕಾಣಿಸಿಕೊಂಡಿತ್ತು. ಹೀಗಾಗಿ ಚಿಕಿತ್ಸೆಗಾಗಿ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಕಡಿಮೆ ವೆಚ್ಚದಲ್ಲಿ, ಪರಿಸರ ಸ್ನೇಹಿ ತೂಗುಸೇತುವೆಗಳ ನಿರ್ಮಾಣದ ಮೂಲಕ ದೇಶ-ವಿದೇಶಗಳಲ್ಲಿ ವಿಶಿಷ್ಟ ಹೆಗ್ಗಳಿಕೆ ಗಳಿಸಿದ್ದ ಡಾ. ಗಿರೀಶ್‌ ಭಾರದ್ವಾಜ ಅವರು, ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕದಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ತೂಗು ಸೇತುವೆ ನಿರ್ಮಿಸಿ ಕೊಟ್ಟು ಬೆಳ್ತಂಗಡಿ ಹಾಗೂ ಪುತ್ತೂರು ತಾಲೂಕನ್ನು ಸಂಪರ್ಕಿಸುವಂತೆ ಮಾಡಿದ್ದರು. ಗ್ರಾಮೀಣ ಭಾಗದ ಜನರಿಗೆ ಸಂಪರ್ಕ ಕಲ್ಪಿಸುವ ನೂರಾರು ಸೇತುವೆಗಳನ್ನು ನಿರ್ಮಿಸಿ ಜನಮಾನಸದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದರು. ಅವರ ಈ ಅಪಾರ ಸಾಮಾಜಿಕ ಸೇವೆ ಹಾಗೂ ಎಂಜಿನಿಯರಿಂಗ್ ಕ್ಷೇತ್ರಕ್ಕೆ ಸಲ್ಲಿಸಿದ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಭಾರತ ಸರ್ಕಾರವು ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಿತ್ತು

Related posts

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya

ಉಂಗಿಲಬೈಲು ಪಾಂಡುರಂಗ ನಿಧನ

Suddi Udaya
error: Content is protected !!