24.8 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ‘ಉತ್ತಮ ಆಹಾರ ಅಭ್ಯಾಸ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮಾಹಿತಿ ಕಾರ್ಯಕ್ರಮ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ‘ಉತ್ತಮ ಆಹಾರ ಅಭ್ಯಾಸ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ’ ಕುರಿತಾದ ಮಾಹಿತಿ ಕಾರ್ಯಕ್ರಮವು ಜು. 4 ರಂದು ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪ ಗೌಡ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮೇಲಿನಡ್ಕ ಉಪ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಭಾರತಿ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ಪೌಷ್ಟಿಕ ಆಹಾರವನ್ನು ಸೇವಿಸುವುದರ ಮಹತ್ವವನ್ನು ವಿವರಿಸಿದರು. ಅಲ್ಲದೆ, ಪ್ರಸ್ತುತ ಕಾಲದಲ್ಲಿ ಹರಡುತ್ತಿರುವ ವಿವಿಧ ಸಾಂಕ್ರಾಮಿಕ ರೋಗಗಳ ಲಕ್ಷಣಗಳು, ಅವುಗಳ ತಡೆಗಟ್ಟುವಿಕೆ ಹಾಗೂ ಸ್ವಚ್ಛತೆಯ ಪಾಲನೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಶಾ ಕಾರ್ಯಕರ್ತೆ ಶ್ರೀಮತಿ ರೇಣುಕಾರವರು ಉಪಸ್ಥಿತರಿದ್ದರು. ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಮಾಹಿತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದರು.

Related posts

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!