25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಉದ್ಘಾಟನೆ

ಉಜಿರೆ: ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ಆಯೋಜಿಸಲಾದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅಶೋಕ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಅವರು, ಇಂದಿನ ಯುವಜನತೆ ಉದ್ಯೋಗ ಅರಸುವವರಾಗುವುದಕ್ಕಿಂತ ಉದ್ಯೋಗ ಸೃಷ್ಟಿಸುವವರಾಗುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಉದ್ಯಮಶೀಲತೆಯು ಆತ್ಮನಿರ್ಭರತೆ ಹಾಗೂ ಆರ್ಥಿಕ ಸಬಲೀಕರಣಕ್ಕೆ ಪ್ರಮುಖ ಸಾಧನವಾಗಿದ್ದು, ತರಬೇತಿಯ ಮೂಲಕ ದೊರೆಯುವ ಜ್ಞಾನ ಮತ್ತು ಕೌಶಲ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕರಾದ ಡಾ. ಬಸವರಾಜ್ ಅವರು ಮಾತನಾಡಿ, ಯಶಸ್ವಿ ಉದ್ಯಮಿಯಾಗಲು ಶಿಸ್ತು, ಯೋಜನೆ, ನವೀನ ಚಿಂತನೆ ಮತ್ತು ನಿರಂತರ ಕಲಿಕೆ ಅಗತ್ಯವೆಂದು ತಿಳಿಸಿದರು. ತರಬೇತಿಯಲ್ಲಿ ಕಲಿಯುವ ವಿಷಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಯಶಸ್ಸು ಸಾಧಿಸಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಹಿರಿಯ ಉಪನ್ಯಾಸಕರಾದ ಕೆ. ಕರುಣಾಕರ ಜೈನ್ ವಂದನಾರ್ಪಣೆ ಸಲ್ಲಿಸಿದರು.

ತರಬೇತಿಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya

ನಿಡ್ಲೆ: ಲಿಲ್ಲಿ ಡಿಸೋಜಾ ನಿಧನ

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya
error: Content is protected !!