30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಂಪೇಗೌಡರ ಜಯಂತಿ ಆಚರಣೆ

ವೇಣೂರು: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣೆ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಆಶ್ರಯದಲ್ಲಿ, ಗೌಡರ (ಒಕ್ಕಲಿಗರ) ಸೇವಾ ಸಂಘ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ, ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗ ಗೌಡರ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆಗಳ ಸಹಯೋಗದಲ್ಲಿ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಕಾರ್ಯಕ್ರಮವು ಬೆಳ್ತಂಗಡಿಯ ಸಿವಿಸಿ ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಚಿನ್ಮಯಿ ಅವರು ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಾನ್ವಿ ಅವರು ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಕಾರ್ಯಕ್ರಮದಲ್ಲಿ ವಿದೇಶದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಕುಂಭಶ್ರೀ ಶಾಲೆಯ ಹಳೆ ವಿದ್ಯಾರ್ಥಿ ಮಾಸ್ಟರ್ ಪೂಜಿತ್ ಕುಲಾಲ್ ಅವರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು.

ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಸಂಸ್ಥಾಪಕ ಗಿರೀಶ್ ಕೆ. ಎಚ್., ಸಂಚಾಲಕರಾದ ಅಶ್ವಿತ್ ಕುಲಾಲ್, ಮುಖ್ಯೋಪಾಧ್ಯಾಯರು, ಮುಖ್ಯೋಪಾಧ್ಯಾಯಿನಿಯರು ಹಾಗೂ ಶಿಕ್ಷಕ-ಶಿಕ್ಷಕಿಯರು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸಾಧನೆಗಳನ್ನು ದಾಖಲಿಸಲಿ ಎಂದು ಶುಭ ಹಾರೈಸಿದರು.

Related posts

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕಡಿರುದ್ಯಾವರ ಕುಕ್ಕಾವು ಕಾರ್ಯಕ್ಷೇತ್ರದಿಂದ ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ತೀರಾ ಹದಗೆಟ್ಟ ಮಚ್ಚಿನ ಪುರುಷರ ಮಜಲು ಕಲಾಯಿ ರಸ್ತೆ : ಶಾಲಾ ಮಕ್ಕಳ ಪರದಾಟ; ದುರಸ್ತಿಗೆ ಸ್ಥಳೀಯರ ಒತ್ತಾಯ

Suddi Udaya
error: Content is protected !!