24.8 C
ಪುತ್ತೂರು, ಬೆಳ್ತಂಗಡಿ
October 7, 2026
Uncategorized

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ನೇಮಕ

ಬೆಳ್ತಂಗಡಿ: ಜುಲೈ 7- 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ನ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಸಮಾಜಸೇವಕ, ಉದ್ಯಮಿ ಹಾಗೂ ಸಾಂಸ್ಕೃತಿಕ ಸಂಘಟಕರಾದ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ಅವರನ್ನು ನೇಮಕ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದವರಾದ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ಅವರು ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಸ್ಮಾರ್ಟ್ ಲೈನರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನಿರ್ದೇಶಕರಾಗಿರುವ ಅವರು, ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನ ಮಾಜಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಶ್ರೀ ಉಮಾಮಹೇಶ್ವರ ದೇವಸ್ಥಾನ, ಮರೋಡಿ ಸೇರಿದಂತೆ ಹಲವು ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸಂಸ್ಥೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿರುವ ಅವರು, 2024ರ ಅಂತರರಾಷ್ಟ್ರೀಯ ಆರ್ಯಭಟ ಪ್ರಶಸ್ತಿ, ಹೆಮ್ಮೆಯ ಪುತ್ರ, ಭಾರತ ಬಂಧು, ಕಲಾ ಪೋಷಕ, ಯಕ್ಷರಕ್ಷಾ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಅವರ ನಾಯಕತ್ವ, ಸಂಘಟನಾ ಸಾಮರ್ಥ್ಯ, ಸಮಾಜಸೇವೆ ಹಾಗೂ ತುಳು ಭಾಷೆ, ಸಂಸ್ಕೃತಿ ಮತ್ತು ತಾಯ್ನಾಡಿನ ಮೇಲಿನ ಬದ್ಧತೆಯನ್ನು ಪರಿಗಣಿಸಿ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಅಂತರರಾಷ್ಟ್ರೀಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕೇಂದ್ರೀಯ ಅಧ್ಯಕ್ಷ ಡಾ. ಅವಿನ್ ಬಿ. ಆರ್. ಆಳ್ವ ಹಾಗೂ ಪ್ರಧಾನ ಕಾರ್ಯದರ್ಶಿ ಅರವಿಂದ ಬೆಳ್ಚಾಡ ಅವರು ದೇವೇಂದ್ರ ಹೆಗ್ಗಡೆ ಕೊಕ್ರಾಡಿ ಅವರನ್ನು ಕರ್ನಾಟಕ ರಾಜ್ಯಾಧ್ಯಕ್ಷರಾಗಿ ನೇಮಕಗೊಳಿಸಿದ್ದಾರೆ.

2028ರ ಶತಮಾನೋತ್ಸವದ ಅಂಗವಾಗಿ ತುಳು ಭಾಷೆಗೆ ಭಾರತದ ಸಂವಿಧಾನದ ಎಂಟನೇ ಅನುಸೂಚಿಯಲ್ಲಿ ಸ್ಥಾನಮಾನ ದೊರಕಿಸುವ ಹೋರಾಟವನ್ನು ಬಲಪಡಿಸುವುದು, ತುಳುವ ನಾಗರಿಕತೆಯ ವೈಭವವನ್ನು ಮರುಸ್ಥಾಪಿಸುವುದು, ರಾಜ್ಯದಾದ್ಯಂತ ತುಳುವ ಮಹಾಸಭೆಯ ಸಂಘಟನೆಯನ್ನು ವಿಸ್ತರಿಸುವುದು, ಯುವಜನರನ್ನು ತುಳು ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣಾ ಕಾರ್ಯದಲ್ಲಿ ತೊಡಗಿಸುವುದು ಹಾಗೂ ಜಾಗತಿಕ ಮಟ್ಟದಲ್ಲಿ ತುಳುವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಅವರು ಕಾರ್ಯನಿರ್ವಹಿಸಲಿದ್ದಾರೆ.

ಈ ನೇಮಕವನ್ನು ತುಳುವರ್ಲ್ಡ್ ಫೌಂಡೇಶನ್ನ ಗೌರವಾಧ್ಯಕ್ಷ ಹರಿನಾರಾಯಣ ದಾಸ ಅಸ್ರಣ್ಣ, ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ಕಾರ್ಯದರ್ಶಿ ವಸಂತ ರೈ ಹಾಗೂ ನಿರ್ದೇಶಕ ಡಾ. ರಾಜೇಶ್ ಕೃಷ್ಣ ಆಳ್ವ ಅವರು ಹರ್ಷದಿಂದ ಸ್ವಾಗತಿಸಿ, ದೇವೇಂದ್ರ ಹೆಗ್ಗಡೆ ಕೊಕ್ರಾಡಿ ಅವರಿಗೆ ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಕಾರ್ಯಾವಧಿಗೆ ಶುಭ ಹಾರೈಸಿದ್ದಾರೆ.

Related posts

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಮರೋಡಿ: ಮಡ್ಲದಲ್ಲಿ ಬರೆ ಕುಸಿತ ಮನೆಗೆ ಹಾನಿ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya
error: Content is protected !!