30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಾಗಾರ

ಬೆಳ್ತಂಗಡಿ : ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಸಂತ ತರೇಸಾ ಪದವಿ ಪೂರ್ವ ಸಂಯುಕ್ತ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಮಾದಕ ದ್ರವ್ಯ ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳಾದ ಬೆಳ್ತಂಗಡಿ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಪಿ ಯವರು ಮಾದಕ ದ್ರವ್ಯಗಳ ಬಳಕೆಯಿಂದ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿ ನೀಡಿದರು. ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅಲ್ಲದೆ, ಅನುಮಾನಾಸ್ಪದ ಮಾದಕ ದ್ರವ್ಯ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುನ್ಹ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿದ್ಯಾರ್ಥಿಗಳು ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ತಮ್ಮ ಸಂದೇಹಗಳಿಗೆ ಉತ್ತರಗಳನ್ನು ಪಡೆದರು. ಕಾರ್ಯಕ್ರಮವು ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಪರಿಣಾಮಕಾರಿಯಾಗಿದ್ದು, ವಿದ್ಯಾರ್ಥಿಗಳು ಇಂತಹ ಅರಿವು ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಉಪನ್ಯಾಸಕಿ ಝಿಟಾ ನಿರೂಪಿಸಿದರು.

Related posts

ಉರುವಾಲು: ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ: ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

Suddi Udaya

ಬಂದಾರು :ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

Suddi Udaya

ಚಂದು ಲಾಯಿಲ ಹಾಗೂ ಬಿ. ರಾಮಣ್ಣ ಶೆಟ್ಟಿ ಮಾಲಾಡಿ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ಜೂ.30: ನಿಮ್ಮ ಸೌಂದರ್ಯದ ರಾಯಭಾರಿ “ನೂರಾ ಗೋಲ್ಡ್ & ಡೈಮಂಡ್ಸ್” ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya
error: Content is protected !!