30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ‘ಎಸ್.ಡಿ.ಎಂ. ಕುರಿತು ಒಳನೋಟ’ ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಜಿರೆ: 2026-27 ರ ಪ್ರವೇಶೋತ್ಸವ ಕಾರ್ಯಕ್ರಮದ ಎರಡನೇ ದಿನವಾದ ಜು.1ರಂದು, ಉಜಿರೆಯ ಎಸ್.ಡಿ.ಎಂ. ಪಾಲಿಟೆಕ್ನಿಕ್‌ನ ಕಾರ್ಯಾಗಾರ (ವರ್ಕ್‌ಶಾಪ್) ಸೆಮಿನಾರ್ ಹಾಲ್‌ನಲ್ಲಿ ‘ಎಸ್.ಡಿ.ಎಂ. ಕುರಿತು ಒಳನೋಟ (An Insight to SDM)’ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಯ ನಿರ್ದೇಶಕ ಪ್ರದೀಪ್ ಶೆಟ್ಟಿ ಭಾಗವಹಿಸಿ, ಎಸ್.ಡಿ.ಎಂ. ಸಂಸ್ಥೆಯ ಪರಂಪರೆ, ಧ್ಯೇಯ ಹಾಗೂ ಸಮಾಜಮುಖಿ ಸೇವಾ ತತ್ವಗಳ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಪರಿಚಯಿಸಿದರು. ತಮ್ಮ ಉಪನ್ಯಾಸದಲ್ಲಿ ಅವರು ಎಸ್.ಡಿ.ಎಂ.ನ ‘ಚತುರ್ಧಾನ’ ಸಂಸ್ಕೃತಿಯನ್ನು ವಿವರಿಸಿ, ಅನ್ನದಾನ, ವಿದ್ಯಾದಾನ, ಆರೋಗ್ಯದಾನ ಹಾಗೂ ಅಭಯದಾನ ಎಂಬ ನಾಲ್ಕು ಪ್ರಮುಖ ಮೌಲ್ಯಗಳ ಮೂಲಕ ಎಸ್.ಡಿ.ಎಂ. ಸಂಸ್ಥೆಯು ಸಮಾಜ ಸೇವೆ, ಮಾನವೀಯ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಸಲ್ಲಿಸುತ್ತಿರುವ ಮಹತ್ವದ ಕೊಡುಗೆಯನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಎಸ್.ಡಿ.ಎಂ.ನ ಆದರ್ಶಗಳು ಮತ್ತು ಮೌಲ್ಯಗಳನ್ನು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಪ್ರದೀಪ್ ಶೆಟ್ಟಿ ಅವರನ್ನು ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ಎಸ್.ಡಿ.ಎಂ.ನ ಸೇವಾ ಪರಂಪರೆ, ಮೌಲ್ಯಾಧಾರಿತ ಶಿಕ್ಷಣ ಮತ್ತು ಸಮಾಜಮುಖಿ ಕಾರ್ಯಚಟುವಟಿಕೆಗಳ ಕುರಿತು ಆಳವಾದ ಅರಿವನ್ನು ಪಡೆದರು.

ಕಾರ್ಯಕ್ರಮವನ್ನು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಈಶ್ವರ್ ಶರ್ಮ ನಿರೂಪಿಸಿದರು.

Related posts

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

Suddi Udaya

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ಮೇ 26: ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ

Suddi Udaya
error: Content is protected !!