24.8 C
ಪುತ್ತೂರು, ಬೆಳ್ತಂಗಡಿ
October 8, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹಾಸನ ಎಸ್‌ಡಿಎಂ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಂದ ಚಲಿಸುತ್ತಿದ್ದ ರೈಲಿನಲ್ಲಿ ಸುರಕ್ಷಿತ ಹೆರಿಗೆ

ಹಾಸನ : ಎಸ್‌ಡಿಎಂ ಆಯುರ್ವೇದ ಕಾಲೇಜು ಹಾಸನ ಮತ್ತು ಆಸ್ಪತ್ರೆಯ ಮಾನಸರೋಗ ಹಾಗೂ ಮನೋವಿಜ್ಞಾನ ವಿಭಾಗದ ಮೂವರು ಸ್ನಾತಕೋತ್ತರ ವಿದ್ಯಾರ್ಥಿಗಳು ಚಲಿಸುತ್ತಿದ್ದ ರೈಲಿನಲ್ಲೇ ಗರ್ಭಿಣಿಗೆ ಸುರಕ್ಷಿತ ಹೆರಿಗೆ ಮಾಡಿಸಿ ತಾಯಿ-ಮಗುವಿನ ಜೀವ ಉಳಿಸುವ ಮೂಲಕ ಮಾನವೀಯತೆ ಹಾಗೂ ವೈದ್ಯಕೀಯ ಕೌಶಲ್ಯಕ್ಕೆ ಮಾದರಿಯಾಗಿದ ಘಟನೆ ಜು.7 ರಂದು ರಾತ್ರಿ ನಡೆದಿದೆ.

ಹಾಸನದ ಡಾ.ರಶ್ಮಿ ಬೀಳಗಿ, ಡಾ. ಶಾಹಿನ್ ಎಂ ಮತ್ತು ಡಾ. ಲತಾಶ್ರೀ ಎನ್ ಅವರು ವಾರಾಣಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ (ಬಿಎಚ್‌ಯು) ನಡೆಯುತ್ತಿದ್ದ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಲು ಹಾಸನದಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಸಹಪ್ರಯಾಣಿಕೆಯಾಗಿದ್ದ ಪೂರ್ಣಗರ್ಭಿಣಿಗೆ ಹೆರಿಗೆ ನೋವು ಆರಂಭವಾಗಿ ಗರ್ಭಜಲ ಸೋರಿಕೆಯಾಗುತ್ತಿರುವುದನ್ನು ಗಮನಿಸಿದ ಅವರು ಕೂಡಲೇ ಪರಿಸ್ಥಿತಿಯನ್ನು ಪರಿಶೀಲಿಸಿ ಚಿಕಿತ್ಸೆ ಆರಂಭಿಸಿದರು.

ಗರ್ಭಿಣಿಯ ಕುಟುಂಬದವರು ಈ ಗರ್ಭಧಾರಣೆ ಅಪಾಯಕಾರಿಯಾಗಿದೆ ಮಗು ಗಂಭೀರ ಸ್ಥಿತಿಯಲ್ಲಿದೆ ಹಾಗೂ ಸಹಜ ಹೆರಿಗೆ ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದರೆಂದು ಹೇಳಿದ್ದರು. ಚಿಕಿತ್ಸೆ ವೆಚ್ಚದ ಬಗ್ಗೆಯೂ ಆತಂಕ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮೂವರು ವೈದ್ಯರು ಕುಟುಂಬದವರಿಗೆ ಧೈರ್ಯ ತುಂಬಿ, ರೈಲಿನಲ್ಲೇ ಸಾಧ್ಯವಾದಷ್ಟು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಿ ತುರ್ತು ಹೆರಿಗೆಗೆ ಸಿದ್ಧತೆ ನಡೆಸಿದರು.

ಹೆರಿಗೆಯ ವೇಳೆ ಮಗುವಿನ ಕುತ್ತಿಗೆಯ ಸುತ್ತ ಹೊಕ್ಕುಳ ಬಳ್ಳಿ ಸುತ್ತಿಕೊಂಡಿರುವುದು (ನುಕಲ್ ಕಾರ್ಡ್) ಪತ್ತೆಯಾಯಿತು. ಡಾ. ರಶ್ಮಿ ಬೀಳಗಿ ಅವರು ಅತ್ಯಂತ ಎಚ್ಚರಿಕೆಯಿಂದ ಹೊಕ್ಕುಳ ಬಳ್ಳಿಯನ್ನು ಸರಿಪಡಿಸಿದರೆ, ಡಾ. ಶಾಹಿನ್ ಎಂ ಹಾಗೂ ಡಾ. ಲತಾಶ್ರೀ ಎನ್ ಅವರು ಹೆರಿಗೆ ಪ್ರಕ್ರಿಯೆಗೆ ನೆರವಾಗಿ ಮಗುವನ್ನು ಸುರಕ್ಷಿತವಾಗಿ ಹೊರತಂದರು. ಜನನದ ನಂತರ ಮಗುವಿಗೆ ಸ್ವಲ್ಪ ಸಮಯ ಪುನರುಜ್ಜೀವನ (ರೆಸಸಿಟೇಶನ್) ನೀಡಲಾಗಿದ್ದು, ಬಳಿಕ ಆರೋಗ್ಯಕರವಾಗಿ ಅಳುವ ಮೂಲಕ ಉತ್ತಮ ಪ್ರತಿಕ್ರಿಯೆ ನೀಡಿತು.

ಸೀಮಿತ ವೈದ್ಯಕೀಯ ಸೌಲಭ್ಯಗಳ ನಡುವೆಯೂ ಹೊಕ್ಕುಳ ಬಳ್ಳಿಯನ್ನು ಸುರಕ್ಷಿತವಾಗಿ ಕತ್ತರಿಸಿ ಕಟ್ಟಿ, ತಾಯಿ-ಮಗುವಿನ ನಡುವೆ ತಕ್ಷಣವೇ ಚರ್ಮ-ಚರ್ಮದ ಸ್ಪರ್ಶ (ಸ್ಕಿನ್-ಟು-ಸ್ಕಿನ್ ಕಾಂಟ್ಯಾಕ್ಟ್) ಕಲ್ಪಿಸಲಾಯಿತು. ನಂತರ ಪ್ಲಸೆಂಟಾ ಹೊರಬರಲು ವಿಳಂಬವಾದಾಗ ಅದನ್ನೂ ಯಶಸ್ವಿಯಾಗಿ ನಿರ್ವಹಿಸಿದರು. ಬಳಿಕ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಮುಂದಿನ ನಿಲ್ದಾಣದಲ್ಲಿ ಆಂಬುಲೆನ್ಸ್ ವ್ಯವಸ್ಥೆ ಮಾಡಿ ತಾಯಿ ಮತ್ತು ನವಜಾತ ಶಿಶುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು.

ಈ ಘಟನೆಯ ಕುರಿತು ಎಸ್‌ಡಿಎಂಇ ಸೊಸೈಟಿಯ ನಿರ್ದೇಶಕ ಶ್ರೀ ಶ್ರೇಯಸ್ ಕುಮಾರ್ ಡಿ ಮಾತನಾಡಿ, “ವೈದ್ಯರ ಕರ್ತವ್ಯ ಆಸ್ಪತ್ರೆಗಳಿಗಷ್ಟೇ ಸೀಮಿತವಲ್ಲ. ತುರ್ತು ಪರಿಸ್ಥಿತಿ ಎಲ್ಲಿಯೇ ಎದುರಾದರೂ ಸೇವೆ ಸಲ್ಲಿಸುವುದು ವೈದ್ಯಕೀಯ ವೃತ್ತಿಯ ಮೂಲ ಧರ್ಮ. ನಮ್ಮ ವಿದ್ಯಾರ್ಥಿಗಳ ಸಮಯೋಚಿತ ನಿರ್ಧಾರ, ತಂಡದ ಕಾರ್ಯಕ್ಷಮತೆ ಹಾಗೂ ಮಾನವೀಯ ಸೇವೆ ಸಂಸ್ಥೆಯ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ” ಎಂದು ಹೇಳಿದರು.

ಈ ಅಪರೂಪದ ಘಟನೆ ವೈದ್ಯಕೀಯ ಜ್ಞಾನ, ತಂಡದ ಕಾರ್ಯ ಹಾಗೂ ಸಮಯೋಚಿತ ನಿರ್ಧಾರಗಳು ಯಾವುದೇ ಪರಿಸ್ಥಿತಿಯಲ್ಲೂ ಜೀವ ಉಳಿಸಬಲ್ಲವು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

Related posts

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya
error: Content is protected !!