24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸ.ಉ.ಪ್ರಾ. ಶಾಲೆಯ ನೂತನ ತರಗತಿ ಕೊಠಡಿ, ಗ್ರಂಥಾಲಯ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಮಚ್ಚಿನ : ಸ.ಉ.ಪ್ರಾ. ಶಾಲೆ ಮಚ್ಚಿನ ಇಲ್ಲಿ ನವಮಂಗಳೂರು ಬಂದರು ಪ್ರಾಧಿಕಾರ ಇವರ ಸಿಎಸ್ ಆರ್ ನಿಧಿಯ ಸಹಕಾರದಿಂದ ನಿರ್ಮಿಸಲಾದ 2 ತರಗತಿ ಕೊಠಡಿಗಳು, ತಾ.ಪಂ. ಅನುದಾನದಲ್ಲಿ ನಿರ್ಮಿಸಿದ ಗ್ರಂಥಾಲಯ ಕೊಠಡಿ ಹಾಗೂ ರಾಜ್ಯ ಸಭಾ ಸದಸ್ಯರು ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಿಂದ ಮಂಜೂರುಗೊಂಡ ಸ್ಮಾರ್ಟ್ ಬೋರ್ಡ್ ನ ಉದ್ಘಾಟನಾ ಸಮಾರಂಭವು ಜು.7ರಂದು ನಡೆಯಿತು.

ನೂತನ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ ರವರು ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಿದೆ ಹಾಗೂ ಶಾಲೆಗಳಲ್ಲಿ ಕಲಿಯುತ್ತಿರುವ ಗ್ರಾಮೀಣ ಮಕ್ಕಳ ಶಿಕ್ಷಣದ ಗುಣಮಟ್ಟವೂ ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಕ್ಷೇತ್ರಶಿಕ್ಷಣಾಧಿಕಾರಿ ಡಾ. ರಾಜರ್ಷಿ ಬಿ., ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಹರೀಶ್ ಕುಮಾರ್, ಹರ್ಷ ಸಂಪಿಗೆತ್ತಾಯ, ನಾಮನಿರ್ದೇಶಿತ ಸದಸ್ಯರಾದ ಪ್ರಮೋದ್ ಕುಮಾರ್, ಸೃಷ್ಟಿ ಕನ್ಸಷ್ಟ್ರನ್ ಇಂಜಿನಿಯರ್ ರಾದ ಯತೀಶ್ ರೈ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ ಮೇಲ್ವಿಚಾರಕರಾದ ಕೇಶವ ನಾಯ್ಕ, ಶಾಲಾ ಮುಖ್ಯೋಪಾಧ್ಯಾಯಿನಿ ಚಂದ್ರಾವತಿ ಕೆ. , ಊರ ವಿದ್ಯಾಭಿಮಾನಿಗಳು, ಪೋಷಕರು, ವಿದ್ಯಾರ್ಥಿಗಳು, ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಫೋಟೋಶಾಪ್ ಮತ್ತು ಲೈಟ್ ರೂಮ್ ಬಗ್ಗೆ ಕಾರ್ಯಗಾರ

Suddi Udaya

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ನೊಚ್ಚ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ,

Suddi Udaya

ಬೆಳ್ತಂಗಡಿ: ಕಾಲುಬಾಯಿ ಲಸಿಕಾ ಕಾರ್ಯಕ್ರಮ ಉದ್ಘಾಟನೆ ಹಾಗೂ ತರಬೇತಿ ಶಿಬಿರ

Suddi Udaya
error: Content is protected !!