24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಳದಂಗಡಿ ಸರ್ಕಾರಿ ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಗೆ ಅನುಮತಿ

ಬೆಳ್ತಂಗಡಿ: ಇಲ್ಲಿನ ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಸಂಯೋಜನೆ ಒಳಗೊಂಡ ತರಗತಿ ಆರಂಭಿಸಲು ಸರ್ಕಾರ ಅನುಮತಿ ನೀಡಿದೆ.

ಕಾಲೇಜಿನಲ್ಲಿ ಈಗಾಗಲೇ ಕಲಾ ವಿಭಾಗ, ವಾಣಿಜ್ಯ ವಿಭಾಗ (ಇತಿಹಾಸ, ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ ಹಾಗೂ ಲೆಕ್ಕಶಾಸ್ತ್ರ) ಮತ್ತು ವಿಜ್ಞಾನ (ಭೌತವಿಜ್ಞಾನ, ರಸಾಯನ ಶಾಸ್ತ್ರ, ಗಣಿತಶಾಸ್ತ್ರ, ಜೀವ ಶಾವಿಜ್ಞಾನ) ವಿಭಾಗಗಳು ಇದ್ದು, ಕಾಲೇಜಿನ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಕ್ಕೆ ಕಂಪ್ಯೂಟರ್ ಸೈನ್ಸ್ ವಿಷಯವೂ ಒಳಗೊಂಡ ವಾಣಿಜ್ಯ ವಿಭಾಗದಲ್ಲಿ ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ಹಾಗೂ ಕಂಪ್ಯೂಟರ್ ಸೈನ್ಸ್, ವಿಜ್ಞಾನ ವಿಭಾಗದಲ್ಲಿ ಭೌತವಿಜ್ಞಾನ, ರಸಾಯನ ವಿಜ್ಞಾನ, ಗಣಿತವಿಜ್ಞಾನ ಹಾಗೂ ಕಂಪ್ಯೂಟರ್ ಸೈನ್ಸ್ ವಿಷಯಗಳ ಸಂಯೋಜನೆಗಳಿಗೆ ಅನುಮತಿ ನೀಡುವಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕ ಶಾಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದರು.

2026-27ನೇ ಸಾಲಿಗೆ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ವಿಷಯವನ್ನು ಒಳಗೊಂಡ ಸಂಯೋಜನೆ ಆರಂಭಿಸಲು ಅನುಮತಿ ನೀಡಿದೆ.

Related posts

ಫೆ.6: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ವೇಣೂರು: ಬಜಿರೆ ಬತ್ತಾರುನಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಸಂಪನ್ನ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!