24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಾನವ ಆರೋಗ್ಯ, ಸಮುದಾಯ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಜಾಗೃತಿ ಕಾರ್ಯಕ್ರಮ

ಉಜಿರೆ : ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿಗಳಿಗಾಗಿ ಮಾನವ ಆರೋಗ್ಯ, ಸಮುದಾಯ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಜು.7 ರಂದು ಆಯೋಜಿಸಲಾಯಿತು.



ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ . ಕಾರ್ತಿಕ್ ಆರ್. ರಾವ್ ತುರ್ತು ಚಿಕಿತ್ಸ ವಿಭಾಗದ ವೈದ್ಯಾಧಿಕಾರಿ , ಎಸ್ ಡಿ ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇವರು ಮಾತನಾಡಿ ಉತ್ತಮ ವೈಯಕ್ತಿಕ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ಹೇಗೆ ? ಆರೋಗ್ಯಕರ ಜೀವನಶೈಲಿ , ಮಾನಸಿಕ ಆರೋಗ್ಯ , ಉತ್ತಮ ಯೋಗಕ್ಷೇಮಕ್ಕಾಗಿ ಸಮುದಾಯ ಆರೋಗ್ಯಕ್ಕೆ ಕೊಡುಗೆ ನೀಡುವ ಮಹತ್ವವನ್ನು ತಿಳಿಸಿದರು.

ಅದಲ್ಲದೆ ದುಶ್ಚಟಗಳ ದುಷ್ಪರಿಣಾಮಗಳು , ನೈರ್ಮಲ್ಯ ಪೋಷಣೆ, ಆರೋಗ್ಯ ರಕ್ಷಣೆ, ರೋಗ ತಡೆಗಟ್ಟುವಿಕೆ ಮತ್ತು ಆರೋಗ್ಯಕರ ಸಮಾಜವನ್ನು ಸೃಷ್ಟಿಸುವಲ್ಲಿ ವಿದ್ಯಾರ್ಥಿಗಳ ಪಾತ್ರವನ್ನು ಒತ್ತಿ ಹೇಳಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಮಾತನಾಡಿ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ವಿದ್ಯಾರ್ಥಿ ಜೀವನದಲ್ಲಿ ಆರೋಗ್ಯಕರ ಜೀವನ ಶೈಲಿಯನ್ನುಅಳವಡಿಸಿಕೊಳ್ಳಿ ಎಂದು ಕರೆ ನೀಡಿದರು.

ಕಾಲೇಜಿನ ಎಲ್ಲಾ ವಿಭಾಗಗಳ ಮುಖ್ಯಸ್ಥರು , ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಅವನೀಶ್ ಪಿ ಸ್ವಾಗತಿಸಿ , ನಿರೂಪಿಸಿದರು.

Related posts

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ನಿಡ್ಲೆ ಗ್ರಾಮ ಪಂಚಾಯತಿನಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಆರೋಪದ ತನಿಖೆಗೆ ಹೈಕೋರ್ಟ್‌ ಆದೇಶ; ಸುಳ್ಳು ಸಾಕ್ಷ್ಯ ಒತ್ತಾಯ ಆರೋಪಕ್ಕೆ ತಡೆ

Suddi Udaya
error: Content is protected !!