23.8 C
ಪುತ್ತೂರು, ಬೆಳ್ತಂಗಡಿ
October 8, 2026
ತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶೈಕ್ಷಣಿಕ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆಯಾಗಿ, ನಾರಾವಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2.00 ಕೋಟಿ ಹಾಗೂ ಬೆಳ್ತಂಗಡಿ ಕಸಬಾದ ಹಳೆಕೋಟೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2.00 ಕೋಟಿ ಸೇರಿದಂತೆ ಒಟ್ಟು ರೂ.4.00 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಈ ಎರಡೂ ಕಡೆಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ನೂತನ ಕಟ್ಟಡಗಳ ನಿರ್ಮಾಣದ ತುರ್ತು ಅಗತ್ಯತೆಯ ಬಗ್ಗೆ ಮಾನ್ಯ ಸಚಿವರ ಗಮನಕ್ಕೆ ವಿಷಯವನ್ನು ತಂದು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ನಿರಂತರವಾಗಿ ಅನುಸರಣೆ ನಡೆಸಿ ಅನುದಾನ ಬಿಡುಗಡೆಗೊಳಿಸಲು ಮನವಿ ಮಾಡಲಾಗಿತ್ತು. ಸರ್ಕಾರವು ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅನುದಾನ ಮಂಜೂರು ಮಾಡಿರುವುದು ಸಂತಸದ ಸಂಗತಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ನೂತನ ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ನಿರ್ಮಿತಿ ಕೇಂದ್ರದ ಮೂಲಕ ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು. ಕಾಮಗಾರಿ ಪೂರ್ಣಗೊಂಡ ಬಳಿಕ ವಿದ್ಯಾರ್ಥಿಗಳಿಗೆ ಸುರಕ್ಷಿತ, ಆಧುನಿಕ ಹಾಗೂ ಉತ್ತಮ ಶೈಕ್ಷಣಿಕ ವಾತಾವರಣದೊಂದಿಗೆ ಅಗತ್ಯ ವಸತಿ ಸೌಲಭ್ಯಗಳು ಲಭ್ಯವಾಗಲಿವೆ.ಶೈಕ್ಷಣಿಕ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿ ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಿ ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ, ಮಾನ್ಯ ಸಚಿವರು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Related posts

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya
error: Content is protected !!