23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಸಾಲಿನ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭವು ವಾಣಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಇವರ ಅಧ್ಯಕ್ಷತೆಯಲ್ಲಿ ಜು.7ರಂದು ನೆರವೇರಿತು.

ವಿದ್ಯಾರ್ಥಿಗಳು ನಾಯಕತ್ವ, ಶಿಸ್ತು, ಸೇವಾ ಮನೋಭಾವ ಹಾಗೂ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮವನ್ನು ಸಿ.ಎ. ವಿ. ಸುಕನ್ಯಾ ಕಾಮತ್, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಹಳೆಯ ವಿದ್ಯಾರ್ಥಿನಿ ಉದ್ಘಾಟಿಸಿ, ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣಗಳು ಭವಿಷ್ಯದ ಯಶಸ್ಸಿಗೆ ಭದ್ರ ಅಡಿಪಾಯವಾಗುತ್ತವೆ ಎಂದು ಹೇಳಿದರು.

ಮಂತ್ರಿಮಂಡಲದ ಸಂಚಾಲಕರಾದ ಶ್ರೀಮತಿ ಮಮತಾ ನೂತನ ನಾಯಕರನ್ನು ಪರಿಚಯಿಸಿದರು.
ಅತಿಥಿಗಳಾಗಿ ವಾಣಿ ವಿದ್ಯಾ ಸಂಸ್ಥೆಯ ಉಪಾಧ್ಯಾಕ್ಷ ನಾರಾಯಣ ಗೌಡ ದೇವಸ್ಯ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ವಿದ್ಯಾರ್ಥಿ ನಾಯಕರಿಗೆ ಶುಭ ಹಾರೈಸಿ, ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂತೆ ಸಲಹೆ ನೀಡಿದರು.


ವೇದಿಕೆಯಲ್ಲಿ 2025-26ನೇ ಸಾಲಿನ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಶೇಖರ್ ಶೆಟ್ಟಿ, ವಾಣಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ. ಎ, ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಇವರು ಪ್ರಮಾಣ ವಚನ ಬೋದಿಸಿದರು. ನೂತನ ನಾಯಕರು ಶಾಲೆಯ ಗೌರವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು.

ವಿಧ್ಯಾರ್ಥಿನಿಯರು ಪ್ರಾರ್ಥಿಸಿ, 10ನೇ ತರಗತಿ ವಿಧ್ಯಾರ್ಥಿ ವಿ ಪ್ರಸನ್ನ ಕಾಮತ್ ಸ್ವಾಗತಿಸಿ, 10ನೇ ತರಗತಿ ವಿದ್ಯಾರ್ಥಿನಿ ಕು. ಅದಿತಿ ಪೂಜಾರಿ ವಂದನಾರ್ಪಣೆಗೈದರು. 10ನೇ ತರಗತಿ ವಿದ್ಯಾರ್ಥಿಯರಾದ ತಸ್ವಿ ಎಸ್ ಮತ್ತು ಅಂಕಿತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!