23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ‘ಟ್ಯಾಲೆಂಟ್ ಹ್ಯೂಸ್ 2026’ ಸಂಭ್ರಮ

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿರುವ ವೈವಿಧ್ಯಮಯ ಪ್ರತಿಭೆಗಳನ್ನು ಅನಾವರಣಗೊಳಿಸುವ ಉದ್ದೇಶದಿಂದ ಆಯೋಜಿಸಲಾದ ವಾರ್ಷಿಕ ಅಂತರ್‌ ತರಗತಿ ವೈವಿಧ್ಯಮಯ ಮನರಂಜನಾ ಸ್ಪರ್ಧಾ ಕಾರ್ಯಕ್ರಮ ‘ಟ್ಯಾಲೆಂಟ್ ಹ್ಯೂಸ್ 2026’ ಜು.7ರಂದು ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು.

ಪ್ರಸಿದ್ಧ ಶಾಸ್ತ್ರೀಯ ಗಾಯಕಿ ಹಾಗೂ ಯಕ್ಷಗಾನ ಕಲಾವಿದೆ, ಸರಕಾರಿ ಪದವಿಪೂರ್ವ ಕಾಲೇಜು ಮಣಿನಾಲ್ಕೂರು ಇಲ್ಲಿನ ಪ್ರಭಾರ ಪ್ರಾಂಶುಪಾಲರಾದ ಶ್ರೀಮತಿ ಶಾಲಿನಿ ಮೆಹಂದಳೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸಿಕೊಳ್ಳಬೇಕು, ವಿದ್ಯಾರ್ಥಿ ಜೀವನದ ಅಮೂಲ್ಯ ಕ್ಷಣಗಳನ್ನು ಸಾರ್ಥಕವಾಗಿ ಬಳಸಿಕೊಳ್ಳಬೇಕು ಹಾಗೂ ಮೊಬೈಲ್ ಮತ್ತು ತಂತ್ರಜ್ಞಾನವನ್ನು ಉತ್ತಮ ಅವಕಾಶಗಳನ್ನು ಸೃಷ್ಟಿಸಿಕೊಳ್ಳಲು ಜವಾಬ್ದಾರಿಯುತವಾಗಿ ಬಳಸಬೇಕು ಎಂದು ಅವರು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುರಜ್ ಚಾರ್ಲ್ಸ್ ನ್ಯೂನಸ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು .ವಿದ್ಯಾರ್ಥಿಗಳ ಉತ್ಸಾಹ, ಸೃಜನಶೀಲತೆ ಮತ್ತು ಸಮರ್ಪಣಾ ಮನೋಭಾವವನ್ನು ಶ್ಲಾಘಿಸಿ, ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ ಸಂಘಟಕರನ್ನು ಅಭಿನಂದಿಸಿದರು.

ಸಾಂಸ್ಕೃತಿಕ ಸಮಿತಿಯ ಸಂಯೋಜಕಿ ಅನಿತಾ ಲೋಬೊ ಸ್ವಾಗತಿಸಿದರು. ವಿದ್ಯಾರ್ಥಿ ಕಾರ್ಯದರ್ಶಿ ಶ್ರಾವ್ಯ ವಂದಿಸಿದರು. ಸಫಾನ ಕಾರ್ಯಕ್ರಮ ನಿರೂಪಿಸಿದರು.

Related posts

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ: ಶಾಸಕ ಹರೀಶ್ ಪೂಂಜ ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ :ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!