23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಜು12:ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ ಸಮಾರಂಭ: ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ಹಾಗೂ ಸಾಂತ್ವನ ನಿಧಿ ವಿತರಣೆ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ, ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ಹಾಗೂ ಸಾಂತ್ವನ ನಿಧಿ ಹಸ್ತಾಂತರ ಕಾರ್ಯಕ್ರಮವು ಜು.12 ರಂದು ಭಾನುವಾರ ಬೆಳಿಗ್ಗೆ 9.30ಕ್ಕೆ ಬೆಳ್ತಂಗಡಿಯ ಶ್ರೀ ಗುರು ಸಾನಿಧ್ಯ ಸಭಾಭವನದಲ್ಲಿ ನಡೆಯಲಿದೆ ಎಂದು ಘಟಕದ ನಿಯೋಜಿತ ಅಧ್ಯಕ್ಷೆ ಲೀಲಾವತಿ ವಸಂತ ಪೂಜಾರಿ ನವಸುಮ ಪಣಕಜೆ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಉದ್ಘಾಟಿಸಲಿದ್ದು, ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಅಧ್ಯಕ್ಷತೆ ವಹಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಎಚ್. ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಸಂಚಾಲಕ ಸಂಪತ್ ಬಿ. ಸುವರ್ಣ ಹಾಗೂ ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಬೆಂಗಳೂರು ಭಾಗವಹಿಸಲಿದ್ದಾರೆ. ಯುವ ಜನರಲ್ಲಿ ನಾಯಕತ್ವದ ಗುಣ, ಸಾಮಾಜಿಕ ಬದ್ಧತೆ ಹಾಗೂ ಸೇವಾ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಯುವವಾಹಿನಿ ನಿರಂತರವಾಗಿ ವಿವಿಧ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಈ ಸಮಾರಂಭದ ಮೂಲಕ ನೂತನ ಪದಾಧಿಕಾರಿಗಳು ಸಮಾಜಮುಖಿ ಕಾರ್ಯಗಳಿಗೆ ಮತ್ತಷ್ಟು ಚೈತನ್ಯ ತುಂಬಲಿದ್ದಾರೆ ಎಂದು ಲೀಲಾವತಿ ವಸಂತ ಪೂಜಾರಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ಹಾಗೂ ಅಗತ್ಯವಿರುವ ಕುಟುಂಬಗಳಿಗೆ ಸಾಂತ್ವನ ನಿಧಿ ವಿತರಿಸಲಾಗುವುದು. ಕಾರ್ಯಕ್ರಮದಲ್ಲಿ ಸದಸ್ಯರು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.

Related posts

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮಟ್ಟದ ಎನ್.ಬಿ.ಎ ಮಾನ್ಯತೆ

Suddi Udaya

ಕೊಯ್ಯೂರು: ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ ನಿಧನ

Suddi Udaya

ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಪ್ರಜ್ಞಾಹೀನ ಸ್ಥಿತಿಗೆ ಜಾರಿದ ಮಹಿಳೆ: ಬಸ್ಸನ್ನು ಆಸ್ಪತ್ರೆಗೆ ಚಲಾಯಿಸಿ ಮಾನವೀಯತೆ ಮೆರೆದ ಬಸ್ ಚಾಲಕ

Suddi Udaya
error: Content is protected !!