August 25, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ ಕಳ್ಳತನ ಪ್ರಕರಣ:ಅಂತರ್ ರಾಜ್ಯ ಕುಖ್ಯಾತ ಕಳ್ಳನಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ಆರು ಕಡೆ ಸರಣಿ ಕಳ್ಳತನ ಮಾಡಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ಪೊಲೀಸರು ತಮಿಳುನಾಡು ರಾಜ್ಯದ ಕೊಯಮುತ್ತೂರು ಜಿಲ್ಲೆಯ ವಿಜಯಾನ್ ಮಗ ಜಯಕುಮಾರ್(55) ಎಂಬಾತನನ್ನು ಗುರುವಾಯನಕೆರೆ ಜಂಕ್ಷನ್ ನಲ್ಲಿ ಜು.8 ರಂದು ಸಂಜೆ 6 ಗಂಟೆಗೆ ಬಂಧಿಸಿ ವಿಚಾರಣೆ ನಡೆಸಿ ಜು.9 ರಂದು ಕಳ್ಳತನ ಮಾಡಿದ ಜಾಗಗಳಲ್ಲಿ ಸ್ಥಳ ಮಹಜರು ನಡೆಸಿ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ನೇತೃತ್ವದಲ್ಲಿ ಸಂಜೆ ಬೆಳ್ತಂಗಡಿ ನ್ಯಾಯಾಲಯ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿ ಬಳಿಯಿಂದ ಪೊಲೀಸರು ಕಳ್ಳತನಕ್ಕೆ ಉಪಯೋಗಿಸಿದ ಒಂದು ಸ್ಕ್ರೂ ಡ್ರೈವರ್ , ಒಂದು ರಾಡ್, ಒಂದು ಆತನ ಕೀ ಪ್ಯಾಂಡ್ ಮೊಬೈಲ್ , ಕಳ್ಳತನ ಮಾಡಿದ ಒಂದು ಆಂಡ್ರ್ಯಾಡ್ ಮೊಬೈಲ್ ,ಒಂದು ಬ್ಯಾಗ್ ಹಾಗೂ 700 ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.

Related posts

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಪುಂಜಾಲಕಟ್ಟೆ ಬಸವನಗುಡಿಯಲ್ಲಿ ಪಿವೈ ಟ್ರೇಡಿಂಗ್ ಟೈಲ್ಸ್,ಗ್ರಾನೈಟ್ ಹಾಗೂ ಸ್ಯಾನಿಟರಿ ಮಳಿಗೆ ಶುಭಾರಂಭ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ಪೆರಿಂಜೆ : ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ

Suddi Udaya

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya
error: Content is protected !!