23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ಗೊದ್ರೇಜ್ ಗೃಹೋಪಯೋಗಿ ಉತ್ಪನ್ನಗಳ ಭರ್ಜರಿ ಮಾನ್ಸೂನ್ ಆಫರ್

ಬೆಳ್ತಂಗಡಿ: ತಾಲೂಕಿನ ಅತ್ಯಂತ ಹಿರಿಯ ಹಾಗೂ ಜನಪ್ರಿಯ ಗೃಹೋಪಯೋಗಿ ವಸ್ತುಗಳ ಮಳಿಗೆಗಳಲ್ಲಿ ಒಂದಾದ ಸೋಜಾ ಎಲೆಕ್ಟ್ರಾನಿಕ್ಸ್ ನಲ್ಲಿ 137 ವರ್ಷಗಳ ಪರಂಪರೆ ಹೊಂದಿರುವ ಗೊದ್ರೇಜ್ ಕಂಪನಿಯ ವಿವಿಧ ಗೃಹೋಪಯೋಗಿ ಉತ್ಪನ್ನಗಳು ಇದೀಗ ಆಕರ್ಷಕ ಬೆಲೆಯಲ್ಲಿ ಲಭ್ಯವಿದ್ದು, ಜುಲೈ 9ರಿಂದ ಮಾನ್ಸೂನ್ ವಿಶೇಷ ಆಫರ್ ಆರಂಭಗೊಂಡಿದೆ ಎಂದು ಸಂಸ್ಥೆಯ ಆಡಳಿತ ಪಾಲುದಾರ ಅಲ್ಫೋನ್ಸ್ ಫ್ರಾಂಕೋ ತಿಳಿಸಿದ್ದಾರೆ.

ಮಾನ್ಸೂನ್ ಆಫರ್ ಅಂಗವಾಗಿ ಆಯ್ದ ಉತ್ಪನ್ನಗಳ ಮೇಲೆ ಶೇ. 5ರಿಂದ 10ರವರೆಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ರೆಫ್ರಿಜರೇಟರ್, ವಾಷಿಂಗ್ ಮೆಷಿನ್, ಏರ್ ಕಂಡೀಷನರ್, ಲಾಕರ್, ಅಲ್ಮೇರಾ ಸೇರಿದಂತೆ ಗೊದ್ರೇಜ್‌ನ ಗುಣಮಟ್ಟದ ಗೃಹೋಪಯೋಗಿ ವಸ್ತುಗಳು ಸ್ಪರ್ಧಾತ್ಮಕ ಹಾಗೂ ಕನಿಷ್ಠ ದರದಲ್ಲಿ ಗ್ರಾಹಕರಿಗೆ ಲಭ್ಯವಿವೆ ಎಂದು ಅವರು ತಿಳಿಸಿದ್ದಾರೆ.

“ಗೊದ್ರೇಜ್” ಎಂದರೆ ಬಲಿಷ್ಠತೆ, ಶ್ರೇಷ್ಠತೆ, ನಾಗರೀಕತೆ ಗ್ರಾಹಕರ ಅಗತ್ಯಕ್ಕೆ ತಕ್ಕಂತೆ ಉತ್ತಮ ಸೇವೆ ಹಾಗೂ ನ್ಯಾಯ ಸಮ್ಮತ ಬೆಲೆಯೊಂದಿಗೆ ಉತ್ಪನ್ನಗಳನ್ನು ಒದಗಿಸುವುದು ನಮ್ಮ ಸಂಸ್ಥೆಯ ಧ್ಯೇಯವಾಗಿದೆ ಎಂದು ಅಲ್ಫೋನ್ಸ್ ಫ್ರಾಂಕೋ ಹೇಳಿದ್ದಾರೆ.

ಯಶಸ್ವಿ ಅಧ್ಯಾಪಕ, ಸಮಾಜಸೇವಕ ಹಾಗೂ ಬಹುಮುಖ ಪ್ರತಿಭೆಯ ವ್ಯಕ್ತಿತ್ವ ಹೊಂದಿರುವ ಅಲ್ಫೋನ್ಸ್ ಫ್ರಾಂಕೋ ಅವರು ಕಳೆದ 31 ವರ್ಷಗಳಿಂದ ಸೋಜಾ ಎಲೆಕ್ಟ್ರಾನಿಕ್ಸ್‌ನ ಆಡಳಿತ ಪಾಲುದಾರರಾಗಿ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಅವರ ನಾಯಕತ್ವದಲ್ಲಿ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆಗಳಲ್ಲಿಯೂ ಲಕ್ಷಾಂತರ ಗ್ರಾಹಕರ ವಿಶ್ವಾಸ ಗಳಿಸಿ, ಬೆಳ್ತಂಗಡಿ ತಾಲೂಕಿನ ಪ್ರಮುಖ ಹಾಗೂ ಹಿರಿಯ ಉದ್ಯಮ ಸಂಸ್ಥೆಗಳಲ್ಲಿ ಒಂದಾಗಿ ಬೆಳೆದಿದೆ.
ಈ ಮಾನ್ಸೂನ್ ಆಫರ್‌ನ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳುವಂತೆ ಸಂಸ್ಥೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.

Related posts

ಕಲ್ಮಂಜ: ಕೃಷಿಕ ಶೀನ ಶೆಟ್ಟಿ ನಿಧನ

Suddi Udaya

ಸೆ.1: ಬಿಜೆಪಿಯಿಂದ ಧರ್ಮಸ್ಥಳ ಚಲೋ-ಬೃಹತ್ ಸಮಾವೇಶ ಕೇಂದ್ರ, ರಾಜ್ಯ ಪ್ರಮುಖರು ಭಾಗಿ-ಲಕ್ಷಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಪತ್ರಿಕಾಗೋಷ್ಠಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾಹಿತಿ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ: ಪ.ಜಾತಿ.ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ. ಅಧ್ಯಕ್ಷತೆಯಲ್ಲಿ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

Suddi Udaya

ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 30ನೇ ವಷ೯ದ ವಾಷಿ೯ಕೋತ್ಸವ

Suddi Udaya
error: Content is protected !!