24.9 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಎನ್‌ಎಸ್‌ಎಸ್ ಸ್ವಯಂಸೇವಕರಿಗಾಗಿ “ಎನ್‌ಎಸ್‌ಎಸ್‌ನ ಉದ್ದೇಶ, ಧ್ಯೇಯ ಹಾಗೂ ಸ್ವಯಂಸೇವಕರ ಜವಾಬ್ದಾರಿಗಳು” ಕುರಿತು ಪ್ರಶಿಕ್ಷಣ ಕಾರ್ಯಗಾರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಕನ್ನಡ ಉಪನ್ಯಾಸಕರೂ ಹಾಗೂ ಹಿರಿಯ ಎನ್‌ಎಸ್‌ಎಸ್ ಸ್ವಯಂಸೇವಕರೂ ಆದ ಶ್ರೀ ಬೆಳಿಯಪ್ಪ ಕೆ. ಅವರು ಭಾಗವಹಿಸಿ, ಎನ್‌ಎಸ್‌ಎಸ್‌ನ ಧ್ಯೇಯ, ಸೇವಾ ಮನೋಭಾವ, ವ್ಯಕ್ತಿತ್ವ ವಿಕಸನ, ನಾಯಕತ್ವ ಗುಣಗಳು, ಸಮಾಜಮುಖಿ ಚಟುವಟಿಕೆಗಳು ಹಾಗೂ ಶಿಸ್ತು-ಬದ್ಧತೆಯ ಮಹತ್ವವನ್ನು ವಿವರಿಸಿದರು.

ವಿದ್ಯಾರ್ಥಿಗಳು ಸಮಾಜ ಸೇವೆಯ ಮೂಲಕ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಶ್ರೀ ದಿನೇಶ್ ಗೌಡ ಯು. ಅವರು ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಸಹ ಕಾರ್ಯಕ್ರಮ ಅಧಿಕಾರಿ ಕುಮಾರಿ ಶ್ರಾವ್ಯ ಎಸ್. ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ವಯಂಸೇವಕ ನಿಶಿತ್ ಸ್ವಾಗತಿಸಿದರು. ಸ್ವಯಂಸೇವಕಿ ಚೈತನ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಸ್ವಯಂಸೇವಕಿ ಸೌಂದರ್ಯ ವಂದನಾರ್ಪಣೆ ಸಲ್ಲಿಸಿದರು.

ಈ ಪ್ರಶಿಕ್ಷಣ ಕಾರ್ಯಗಾರದಲ್ಲಿ ಎನ್‌ಎಸ್‌ಎಸ್‌ನ ಅನೇಕ ಸ್ವಯಂಸೇವಕರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

Related posts

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya
error: Content is protected !!