24.3 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

ಗುರುವಾಯನಕೆರೆ: ದೇಶದ ಅತ್ಯುನ್ನತ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರ ಮಟ್ಟದ ‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ (IISER IAT 2026) ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್‌ಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಯಶಸ್‌ ಗೌಡ ಎನ್‌ -ರ‍್ಯಾಂಕ್ 312 ಹಾಗೂ ಪಂಚಮಿ ಪಿ ಎನ್‌ -ರ‍್ಯಾಂಕ್ 430 ಅತ್ಯುನ್ನತ ಸಾಧನೆ ಮಾಡಿದ್ದು, ಉಳಿದಂತೆ ಹಲವು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಶ್ರೇಷ್ಠ ರ‍್ಯಾಂಕ್‌ಗಳನ್ನು ಗಿಟ್ಟಿಸಿಕೊಂಡಿದ್ದಾರೆ.

ಸಾಧಕ ವಿದ್ಯಾರ್ಥಿಗಳ ವಿವರ: ಯಶಸ್‌ ಗೌಡ ಎನ್‌ – ರ‍್ಯಾಂಕ್:312, ಪಂಚಮಿ ಪಿ ಎನ್‌ – ರ‍್ಯಾಂಕ್: 430, ನಿಶ್ಚಿತ – ರ‍್ಯಾಂಕ್: 505, ರಾಹುಲ್ ಬಿ – ರ‍್ಯಾಂಕ್: 677, ವಿದ್ಯಾಧರ್ ಬಿ ಆರ್ ‌ – ರ‍್ಯಾಂಕ್: 698, ಶಿಲ್ಪಿತಾ ಹೆಚ್‌ ಎಸ್‌ – ರ‍್ಯಾಂಕ್: 1088, ತಜ್ಞ ಟಿ ಎಸ್‌ – ರ‍್ಯಾಂಕ್: 2688, ಧೃತಿ ಎಂ – ರ‍್ಯಾಂಕ್: 3329′
ವಿದ್ಯಾರ್ಥಿಗಳ ಈ ಅತ್ಯುತ್ತಮ ಶೈಕ್ಷಣಿಕ ಸಾಧನೆಗೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅತೀವ ಸಂತೋಷ ವ್ಯಕ್ತಪಡಿಸಿದ್ದಾರೆ. ಕಾಲೇಜಿನ ಗುಣಮಟ್ಟದ ಶಿಕ್ಷಣ, ನಿರಂತರ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮವೇ ಈ ಯಶಸ್ಸಿಗೆ ಕಾರಣ ಎಂದು ಆಡಳಿತ ಮಂಡಳಿಯ ಅಧ್ಯಕ್ಷರು ಶ್ಲಾಘಿಸಿದ್ದಾರೆ. ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳ ಮುಂದಿನ ಉನ್ನತ ಸಂಶೋಧನಾ ಹಾದಿಗೆ ಕಾಲೇಜಿನ ಪರವಾಗಿ ಶುಭ ಹಾರೈಸಲಾಗಿದೆ.

Related posts

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಡಿ.28 (ನಾಳೆ) ವಿದ್ಯುತ್ ನಿಲುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!