33.7 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

ಕೊಯ್ಯೂರು: ಬಜಿಲ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಜು.10 ರಂದು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಕೊಯ್ಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ಹರಿಣಾಕ್ಷಿ ಇವರು ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ಬಳಕೆ, ಪೌಷ್ಟಿಕ ಆಹಾರದ ಮಹತ್ವ, ನಿಯಮಿತ ವ್ಯಾಯಾಮ, ಯೋಗಾಭ್ಯಾಸ ಹಾಗೂ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ನೀಡಿದರು. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಸ್ವಚ್ಛತೆಯನ್ನು ಪಾಲಿಸುವುದು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.

ನಂತರ ಮೊಬೈಲ್‌ ಫೋನ್‌ನ ಅತಿಯಾದ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು. ದೀರ್ಘಕಾಲ ಮೊಬೈಲ್ ಬಳಸುವುದರಿಂದ ಕಣ್ಣಿನ ತೊಂದರೆ, ನಿದ್ರಾಹೀನತೆ, ಏಕಾಗ್ರತೆಯ ಕೊರತೆ ಹಾಗೂ ಅಧ್ಯಯನದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಲಾಯಿತು. ವಿದ್ಯಾರ್ಥಿಗಳು ಅಗತ್ಯವಿದ್ದಾಗ ಮಾತ್ರ ಮೊಬೈಲ್ ಬಳಸಬೇಕು ಹಾಗೂ ಹೆಚ್ಚು ಸಮಯವನ್ನು ಓದು, ಆಟ ಮತ್ತು ಸೃಜನಾತ್ಮಕ ಚಟುವಟಿಕೆಗಳಿಗೆ ಮೀಸಲಿಡುವಂತೆ ಸಲಹೆ ನೀಡಲಾಯಿತು.

ಅಲ್ಲದೆ, ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು. ಮಾದಕ ದ್ರವ್ಯಗಳ ಸೇವನೆಯು ಆರೋಗ್ಯ, ಶಿಕ್ಷಣ, ಕುಟುಂಬ ಹಾಗೂ ಸಮಾಜದ ಮೇಲೆ ಉಂಟುಮಾಡುವ ಹಾನಿಕಾರಕ ಪರಿಣಾಮಗಳನ್ನು ವಿವರಿಸಲಾಯಿತು. ಯಾವುದೇ ರೀತಿಯ ಮಾದಕ ವಸ್ತುಗಳಿಂದ ದೂರವಿದ್ದು, ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನ ನಡೆಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಆಸಕ್ತಿಯಿಂದ ಭಾಗವಹಿಸಿ ತಮ್ಮ ಸಂದೇಹಗಳನ್ನು ನಿವಾರಿಸಿಕೊಂಡರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ

Suddi Udaya

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya
error: Content is protected !!