25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

ನಾರಾವಿ : ಸಂತ ಅಂತೋನಿ ಪದವಿ ಪೂರ್ವ ಕಾಲೇಜು ನಾರಾವಿ ಇದರ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜು.9 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನುಸಂಸ್ಥೆಯ ಜೊತೆ ಕಾರ್ಯದರ್ಶಿಯಾಗಿರುವ ವಂದನೀಯ ಫಾದರ್ ಜೆರೋಮ್ ಡಿಸೋಜಾ ವಹಿಸಿ ಮಾತನಾಡಿ ಒಬ್ಬ ಉತ್ತಮ ನಾಯಕ ಎಂದರೆ ಅಧಿಕಾರವನ್ನು ತೋರಿಸುವವನು ಅಲ್ಲ; ತನ್ನ ತಂಡವನ್ನು ಮುನ್ನಡೆಸುವವನು, ಎಲ್ಲರ ಮಾತು ಕೇಳುವವನು ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವವನು ನಿಮ್ಮ ನಾಯಕತ್ವವು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದರು.

ಮುಖ್ಯ ಅತಿಥಿಗಳಾಗಿ ನಾರಾವಿ ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷರಾದ ಸಂಜಯ್ ಮಿರಾಂದ ಹಾಗೂ ಕಾರ್ಯದರ್ಶಿಯಾಗಿರುವ ಸುಮಿತಾ ಡಿಸೋಜಾರವರು ಉಪಸ್ಥಿತರಿದ್ದರು.ಕಾಲೇಜು ಪ್ರಾಂಶುಪಾಲರಾದ ಸಂತೋಷ್ ಸಾಲ್ದಾನ್ಹ ಹಾಗೂ ವಿದ್ಯಾರ್ಥಿ ಸಂಘದ ಸಂಯೋಜಕಿ ಸೋನಿಯಾ ಡಿಸೋಜಾ ಹಾಜರಿದ್ದರು. ಕಾರ್ಯಕ್ರಮವನ್ನು ಪ್ರಥಮ ವಿಜ್ಞಾನ ವಿಭಾಗದ ಕುಮಾರಿ ಸ್ನೇಹ ಇವರು ನಿರೂಪಿಸಿದರು. ಉಪನ್ಯಾಸಕಿ ರಾಜೇಶ್ವರಿ ವಂದಿಸಿದರು.

Related posts

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ಅಳದಂಗಡಿಯಲ್ಲಿ ನಡೆದ ತುಳುನಾಡ ಸಿಂಗಾರ ಕಾರ್ಯಕ್ರಮದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ

Suddi Udaya

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ಒಟ್ಲ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚಿತ್ತರಂಜನ್ ಕಂಕನಾಡಿ ದಂಪತಿಗಳಿಂದ ಸಂಕ್ರಮಣ ಪೂಜೆ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya
error: Content is protected !!